Matthew · chapter 20 · verse 19
Matthew 20:19 in Kannada
ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
Idallade aatanannu haasya maadu vadakkoo koradegalinda hodeyuvadakkoo shilubege haakuvadakkoo aatanannu anyajanarige oppisikoduvaru; mattu mooraneya dinadalli aatanu tirigi eddu baruvanu endu helidanu.
Matthew 20:19 in English
- King James Version (KJV)
- And shall deliver him to the Gentiles to mock, and to scourge, and to crucify [him]: and the third day he shall rise again.
- World English Bible (WEB)
- and will hand him over to the Gentiles to mock, to scourge, and to crucify; and the third day he will be raised up.”
- American Standard Version (ASV)
- and shall deliver him unto the Gentiles to mock, and to scourge, and to crucify: and the third day he shall be raised up.
- Bible in Basic English (BBE)
- And will give him up to the Gentiles to be made sport of and to be whipped and to be put to death on the cross: and the third day he will come back again from the dead.
- Darby Translation (DBY)
- and they will deliver him up to the nations to mock and to scourge and to crucify, and the third day he shall rise again.
- Webster's Bible (WBS)
- And will deliver him to the Gentiles to mock, and to scourge, and to crucify [him] : and the third day he will rise again.
- Young's Literal Translation (YLT)
- and they shall condemn him to death, and shall deliver him to the nations to mock, and to scourge, and to crucify, and the third day he will rise again.'
Read in context
- 17ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--
- 18ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
- 19ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
- 20ತರುವಾಯ ಜೆಬೆದಾಯನ ಮಕ್ಕಳ ತಾಯಿಯು ತನ್ನ ಕುಮಾರರೊಂದಿಗೆ ಆತನ ಬಳಿಗೆ ಬಂದು ಆತ ನನ್ನು ಆರಾಧಿಸುತ್ತಾ ಆತನನ್ನು ಏನೋ ಬೇಡಿಕೊಳ್ಳ ಬೇಕೆಂದು ಅಪೇಕ್ಷಿಸಿದಳು.
- 21ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು.
Cross references
- Matthew 16:21 ಮತ್ತಾಯನು 16:21ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- Mark 15:16–20 ಮಾರ್ಕನು 15:16–20ತರುವಾಯ ಸೈನಿಕರು ಆತನನ್ನು ಪ್ರೇತೋ ರಿಯಂ ಎಂಬ ಮಂದಿರದೊಳಕ್ಕೆ ತೆಗೆದುಕೊಂಡು ಬಂದು ಸೈನಿಕರನ್ನೆಲ್ಲಾ ಒಟ್ಟಾಗಿ ಕರೆದರು. ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು. ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು. ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
- 1 Corinthians 15:3–7 1 ಕೊರಿಂಥದವರಿಗೆ 15:3–7ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು. ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು. ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು. ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ. ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.
- Psalm 22:7–8 ಕೀರ್ತನೆಗಳು 22:7–8ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ-- ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
- Hosea 6:2 ಹೋಶೇಯ 6:2ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- Acts 2:23 ಅಪೊಸ್ತಲರ ಕೃತ್ಯಗಳು 2:23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- Isaiah 26:19 ಯೆಶಾಯ 26:19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
- Psalm 35:16 ಕೀರ್ತನೆಗಳು 35:16ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
- Matthew 27:27–31 ಮತ್ತಾಯನು 27:27–31ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು. ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು. ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು. ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು. ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು.
- John 18:28–38 ಯೋಹಾನನು 18:28–38ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ. ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು. ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು. ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು. ತರುವಾಯ ಪಿಲಾತನು ತಿರಿಗಿ ನ್ಯಾಯಾಲಯ ದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಆತ ನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೆ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿ ದ್ದಾರೋ? ಅಂದನು. ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು. ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು. ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
- Luke 23:1–5 ಲೂಕನು 23:1–5ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು. ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು. ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು. ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು. ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.