Matthew · chapter 20 · verse 29
Matthew 20:29 in Kannada
ಅವರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು.
Avaru yerikovininda horatu hoguttiruvaaga janaru dodda samoohavaagi aatanannu himbaalisidaru.
Matthew 20:29 in English
- King James Version (KJV)
- And as they departed from Jericho, a great multitude followed him.
- World English Bible (WEB)
- As they went out from Jericho, a great multitude followed him.
- American Standard Version (ASV)
- And as they went out from Jericho, a great multitude followed him.
- Bible in Basic English (BBE)
- And when they were going out from Jericho, a great number went after him.
- Darby Translation (DBY)
- And as they went out from Jericho a great crowd followed him.
- Webster's Bible (WBS)
- And as they departed from Jericho, a great multitude followed him.
- Young's Literal Translation (YLT)
- And they going forth from Jericho, there followed him a great multitude,
Read in context
- 27ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ.
- 28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- 29ಅವರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು.
- 30ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
- 31ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
Cross references
- Mark 10:46–52 ಮಾರ್ಕನು 10:46–52ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು. ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು. ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು. ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು. ಅವನು ತನ್ನ ಉಡುಪನ್ನು ತೆಗೆದುಹಾಕಿ ಎದ್ದು ಯೇಸುವಿನ ಬಳಿಗೆ ಬಂದನು. ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು. ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
- Luke 18:35–43 ಲೂಕನು 18:35–43ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು; ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು. ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು. ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು. ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು. ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ-- ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು. ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು. ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
- Matthew 9:27–31 ಮತ್ತಾಯನು 9:27–31ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು. ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು. ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು. ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು.