Matthew · chapter 20 · verse 4
Matthew 20:4 in Kannada
ಅವರಿಗೆ--ನೀವು ಸಹ ದ್ರಾಕ್ಷೇ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುವೆನು ಎಂದು ಹೇಳಿದನು. ಆಗ ಅವರು ಹೊರಟು ಹೋದರು.
Avarige--neevu saha draakshe totakke hogiri; sariyaada kooliyannu naanu nimage koduvenu endu helidanu. Aaga avaru horatu hodaru.
Matthew 20:4 in English
- King James Version (KJV)
- And said unto them; Go ye also into the vineyard, and whatsoever is right I will give you. And they went their way.
- World English Bible (WEB)
- He said to them, ‘You also go into the vineyard, and whatever is right I will give you.’ So they went their way.
- American Standard Version (ASV)
- and to them he said, Go ye also into the vineyard, and whatsoever is right I will give you. And they went their way.
- Bible in Basic English (BBE)
- And he said to them, Go into the vine-garden with the others, and whatever is right I will give you. And they went to work.
- Darby Translation (DBY)
- and to them he said, Go also ye into the vineyard, and whatsoever may be just I will give you. And they went their way.
- Webster's Bible (WBS)
- And said to them, Go ye also into the vineyard; and whatever is right, I will give you. And they departed.
- Young's Literal Translation (YLT)
- and to these he said, Go ye — also ye — to the vineyard, and whatever may be righteous I will give you;
Read in context
- 2ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು.
- 3ಮತ್ತು ಅವನು ಸುಮಾರು ಮೂರನೆಯ ತಾಸಿನಲ್ಲಿ ಹೊರಗೆಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವದನ್ನು ಕಂಡು
- 4ಅವರಿಗೆ--ನೀವು ಸಹ ದ್ರಾಕ್ಷೇ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುವೆನು ಎಂದು ಹೇಳಿದನು. ಆಗ ಅವರು ಹೊರಟು ಹೋದರು.
- 5ಅವನು ಸುಮಾರು ಆರನೆಯ ಮತ್ತು ಒಂಭತ್ತನೆಯ ತಾಸಿನಲ್ಲಿ ತಿರಿಗಿ ಹೋಗಿ ಹಾಗೆಯೇ ಮಾಡಿದನು.
- 6ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು.
Cross references
- 1 Peter 4:2–3 1 ಪೇತ್ರನು 4:2–3ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- Matthew 21:23–31 ಮತ್ತಾಯನು 21:23–31ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು? ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು. ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು. ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ. ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು. ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ. ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- 1 Corinthians 6:11 1 ಕೊರಿಂಥದವರಿಗೆ 6:11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Colossians 4:1 ಕೊಲೊಸ್ಸೆಯವರಿಗೆ 4:1ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ.
- Matthew 9:9 ಮತ್ತಾಯನು 9:9ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
- Titus 3:8 ತೀತನಿಗೆ 3:8ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
- Luke 19:7–10 ಲೂಕನು 19:7–10ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು. ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು. ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ. ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
- 1 Timothy 1:12–13 1 ತಿಮೊಥೆಯನಿಗೆ 1:12–13ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ. ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
- Romans 6:16–22 ರೋಮಾಪುರದವರಿಗೆ 6:16–22ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ. ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ. ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ. ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ. ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ. ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ. ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.