Matthew · chapter 21 · verse 26
Matthew 21:26 in Kannada
ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
Manushyarinda endu naavu heli dare janarige bhayapadutteve; yaakandare yohaananu pravaadiyendu ellaroo enisu ttaare endu andukondaru.
Matthew 21:26 in English
- King James Version (KJV)
- But if we shall say, Of men; we fear the people; for all hold John as a prophet.
- World English Bible (WEB)
- But if we say, ‘From men,’ we fear the multitude, for all hold John as a prophet.”
- American Standard Version (ASV)
- But if we shall say, From men; we fear the multitude; for all hold John as a prophet.
- Bible in Basic English (BBE)
- But if we say, From men; we are in fear of the people, because all take John to be a prophet.
- Darby Translation (DBY)
- but if we should say, Of men, we fear the crowd, for all hold John for a prophet.
- Webster's Bible (WBS)
- But if we shall say, From men; we fear the people: for all hold John as a prophet.
- Young's Literal Translation (YLT)
- and if we should say, From men, we fear the multitude, for all hold John as a prophet.'
Read in context
- 24ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
- 25ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
- 26ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
- 27ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
- 28ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
Cross references
- Mark 6:20 ಮಾರ್ಕನು 6:20ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
- John 5:35 ಯೋಹಾನನು 5:35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
- Matthew 14:5 ಮತ್ತಾಯನು 14:5ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
- Matthew 21:46 ಮತ್ತಾಯನು 21:46ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
- Matthew 11:9 ಮತ್ತಾಯನು 11:9ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
- John 9:22 ಯೋಹಾನನು 9:22ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
- Acts 5:26 ಅಪೊಸ್ತಲರ ಕೃತ್ಯಗಳು 5:26ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
- Luke 22:2 ಲೂಕನು 22:2ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
- Luke 20:6 ಲೂಕನು 20:6ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು
- Mark 11:32 ಮಾರ್ಕನು 11:32ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
- Isaiah 57:11 ಯೆಶಾಯ 57:11ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
- Luke 20:19 ಲೂಕನು 20:19ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.