Matthew · chapter 21 · verse 33
Matthew 21:33 in Kannada
ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
Mattondu saamyavannu keliri: obba mane yajamaananu draakshetotavannu nettu adara suttaloo belihaaki adarolage tottiyannu agedu gopuravannu katti okkaligarige vaarakke kottu dooradeshakke hodanu.
Matthew 21:33 in English
- King James Version (KJV)
- Hear another parable: There was a certain householder, which planted a vineyard, and hedged it round about, and digged a winepress in it, and built a tower, and let it out to husbandmen, and went into a far country:
- World English Bible (WEB)
- “Hear another parable. There was a man who was a master of a household who planted a vineyard, set a hedge about it, dug a wine press in it, built a tower, leased it out to farmers, and went into another country.
- American Standard Version (ASV)
- Hear another parable: There was a man that was a householder, who planted a vineyard, and set a hedge about it, and digged a winepress in it, and built a tower, and let it out to husbandmen, and went into another country.
- Bible in Basic English (BBE)
- Give ear to another story. A master of a house made a vine garden, and put a wall round it, and made a place for crushing out the wine, and made a tower, and let it out to field-workers, and went into another country.
- Darby Translation (DBY)
- Hear another parable: There was a householder who planted a vineyard, and made a fence round it, and dug a winepress in it, and built a tower, and let it out to husbandmen, and left the country.
- Webster's Bible (WBS)
- Hear another parable; There was a certain householder, who planted a vineyard, and hedged it around, and digged a wine-press in it, and built a tower, and let it out to husbandmen, and went into a remote country:
- Young's Literal Translation (YLT)
- 'Hear ye another simile: There was a certain man, a householder, who planted a vineyard, and did put a hedge round it, and digged in it a wine-press, and built a tower, and gave it out to husbandmen, and went abroad.
Read in context
- 31ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
- 32ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
- 33ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
- 34ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
- 35ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
Cross references
- Isaiah 5:1–4 ಯೆಶಾಯ 5:1–4ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ. ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು. ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ. ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
- Mark 12:1–12 ಮಾರ್ಕನು 12:1–12ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು. ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು. ಆದರೆ ಅವರು ಅವನನ್ನು ಹಿಡಿದು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು. ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು. ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು. ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು. ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು. ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನ ಕೆಲಸವೇ ಆಗಿತ್ತು. ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆಯಲ್ಲಾ ಎಂಬ ಈ ಬರಹವನ್ನು ನೀವು ಓದಲಿಲ್ಲವೋ ಎಂದು ಹೇಳಿದನು. ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
- Luke 20:9–19 ಲೂಕನು 20:9–19ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು. ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು. ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು. ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು. ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು. ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು. ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು? ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು. ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು? ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು. ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
- Jeremiah 2:21 ಯೆರೆಮೀಯ 2:21ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
- John 15:1 ಯೋಹಾನನು 15:1ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
- Song of Solomon 8:11–12 ಪರಮಗೀತೆ 8:11–12ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು. ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.
- Hosea 4:1 ಹೋಶೇಯ 4:1ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
- Malachi 2:4–9 ಮಲಾಕಿಯ 2:4–9ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ. ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು. ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು. ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ. ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ. ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
- Psalm 80:8–16 ಕೀರ್ತನೆಗಳು 80:8–16ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ. ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು. ಅದರ ನೆರಳಿನಿಂದ ಬೆಟ್ಟ ಗಳೂ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲ್ಪ ಟ್ಟವು. ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು. ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ? ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ. ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು. ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.
- Luke 19:12 ಲೂಕನು 19:12ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.
- Jeremiah 19:3 ಯೆರೆಮೀಯ 19:3ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು.
- Isaiah 1:10 ಯೆಶಾಯ 1:10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.