Matthew · chapter 21 · verse 34
Matthew 21:34 in Kannada
ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
Phalada kaalavu samaapisidaaga tanna phalagalannu padakollu vadakke tanna sevakarannu okkaligara balige kaluhisikottanu.
Matthew 21:34 in English
- King James Version (KJV)
- And when the time of the fruit drew near, he sent his servants to the husbandmen, that they might receive the fruits of it.
- World English Bible (WEB)
- When the season for the fruit came near, he sent his servants to the farmers to receive his fruit.
- American Standard Version (ASV)
- And when the season of the fruits drew near, he sent his servants to the husbandmen, to receive his fruits.
- Bible in Basic English (BBE)
- And when the time for the fruit came near, he sent his servants to the workmen, to get the fruit.
- Darby Translation (DBY)
- But when the time of fruit drew near, he sent his bondmen to the husbandmen to receive his fruits.
- Webster's Bible (WBS)
- And when the time of the fruit drew near, he sent his servants to the husbandmen, that they might receive the fruits of it.
- Young's Literal Translation (YLT)
- 'And when the season of the fruits came nigh, he sent his servants unto the husbandmen, to receive the fruits of it,
Read in context
- 32ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
- 33ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
- 34ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
- 35ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
- 36ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
Cross references
- Luke 20:10–19 ಲೂಕನು 20:10–19ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು. ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು. ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು. ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು. ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು. ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು? ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು. ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು? ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು. ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
- Zechariah 1:3–6 ಜೆಕರ್ಯ 1:3–6ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ. ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ? ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Isaiah 5:4 ಯೆಶಾಯ 5:4ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
- 2 Chronicles 36:15–16 2 ಪೂರ್ವಕಾಲವೃತ್ತಾಂತ 36:15–16ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Nehemiah 9:29–30 ನೆಹೆಮೀಯ 9:29–30ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು. ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
- Mark 12:2–5 ಮಾರ್ಕನು 12:2–5ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು. ಆದರೆ ಅವರು ಅವನನ್ನು ಹಿಡಿದು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು. ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು. ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು.
- 2 Kings 17:13–23 2 ಅರಸುಗಳು 17:13–23ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು. ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು. ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು. ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ. ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು. ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು. ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ. ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
- Zechariah 7:9–13 ಜೆಕರ್ಯ 7:9–13ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ; ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು. ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು. ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Jeremiah 25:3–7 ಯೆರೆಮೀಯ 25:3–7ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ. ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ. ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ. ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು. ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
- Song of Solomon 8:11–12 ಪರಮಗೀತೆ 8:11–12ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು. ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.
- Matthew 22:3 ಮತ್ತಾಯನು 22:3ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.
- Jeremiah 35:15 ಯೆರೆಮೀಯ 35:15ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.