Matthew · chapter 21 · verse 38
Matthew 21:38 in Kannada
ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
Aadare okkaligaru aa maganannu nodi tammatammolage--ivane baadhyasthanaagiddaane, banniri; naavu ivanannu kondu ivana svaastyavannu svaadheenamaadiko llona endu andu kondaru.
Matthew 21:38 in English
- King James Version (KJV)
- But when the husbandmen saw the son, they said among themselves, This is the heir; come, let us kill him, and let us seize on his inheritance.
- World English Bible (WEB)
- But the farmers, when they saw the son, said among themselves, ‘This is the heir. Come, let’s kill him and seize his inheritance.’
- American Standard Version (ASV)
- But the husbandmen, when they saw the son, said among themselves, This is the heir; come, let us kill him, and take his inheritance.
- Bible in Basic English (BBE)
- But when the workmen saw the son, they said among themselves, This is he who will one day be the owner of the property; come, let us put him to death and take his heritage.
- Darby Translation (DBY)
- But the husbandmen, seeing the son, said among themselves, This is the heir; come, let us kill him and possess his inheritance.
- Webster's Bible (WBS)
- But when the husbandmen saw the son, they said among themselves, This is the heir; come, let us kill him, and let us seize on his inheritance.
- Young's Literal Translation (YLT)
- and the husbandmen having seen the son, said among themselves, This is the heir, come, we may kill him, and may possess his inheritance;
Read in context
- 36ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
- 37ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
- 38ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
- 39ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
- 40ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
Cross references
- Luke 20:14 ಲೂಕನು 20:14ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.
- Genesis 37:18–20 ಆದಿಕಾಂಡ 37:18–20ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು. ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ; ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Hebrews 1:2 ಇಬ್ರಿಯರಿಗೆ 1:2ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
- Mark 12:7–8 ಮಾರ್ಕನು 12:7–8ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು.
- Acts 4:27–28 ಅಪೊಸ್ತಲರ ಕೃತ್ಯಗಳು 4:27–28ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Matthew 26:3–4 ಮತ್ತಾಯನು 26:3–4ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- John 11:47–53 ಯೋಹಾನನು 11:47–53ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು. ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ-- ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು. ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು. ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Matthew 27:1–2 ಮತ್ತಾಯನು 27:1–2ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು. ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
- Psalm 2:2–8 ಕೀರ್ತನೆಗಳು 2:2–8ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು. ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ. ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
- Acts 5:24–28 ಅಪೊಸ್ತಲರ ಕೃತ್ಯಗಳು 5:24–28ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು. ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು. ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು. ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು-- ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- Matthew 2:13–16 ಮತ್ತಾಯನು 2:13–16ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು. ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು. ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ