Matthew · chapter 21 · verse 39
Matthew 21:39 in Kannada
ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
Avaru avanannu hididu draakshe totadinda horage haaki avanannu kondu haakidaru.
Matthew 21:39 in English
- King James Version (KJV)
- And they caught him, and cast [him] out of the vineyard, and slew [him].
- World English Bible (WEB)
- So they took him and threw him out of the vineyard, then killed him.
- American Standard Version (ASV)
- And they took him, and cast him forth out of the vineyard, and killed him.
- Bible in Basic English (BBE)
- And they took him and, driving him out of the vine-garden, put him to death.
- Darby Translation (DBY)
- And they took him, and cast him forth out of the vineyard, and killed him.
- Webster's Bible (WBS)
- And they caught him, and cast [him] out of the vineyard, and slew [him] .
- Young's Literal Translation (YLT)
- and having taken him, they cast [him] out of the vineyard, and killed him;
Read in context
- 37ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
- 38ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
- 39ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
- 40ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
- 41ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
Cross references
- Acts 2:23 ಅಪೊಸ್ತಲರ ಕೃತ್ಯಗಳು 2:23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- Acts 7:52 ಅಪೊಸ್ತಲರ ಕೃತ್ಯಗಳು 7:52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Acts 4:25–27 ಅಪೊಸ್ತಲರ ಕೃತ್ಯಗಳು 4:25–27ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು? ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ. ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
- James 5:6 ಯಾಕೋಬನು 5:6ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.
- Luke 22:52–54 ಲೂಕನು 22:52–54ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ? ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು. ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
- Matthew 26:57 ಮತ್ತಾಯನು 26:57ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.
- John 18:12 ಯೋಹಾನನು 18:12ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ.
- Acts 3:14–15 ಅಪೊಸ್ತಲರ ಕೃತ್ಯಗಳು 3:14–15ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- Acts 4:10 ಅಪೊಸ್ತಲರ ಕೃತ್ಯಗಳು 4:10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- Matthew 26:50 ಮತ್ತಾಯನು 26:50ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
- Acts 5:30 ಅಪೊಸ್ತಲರ ಕೃತ್ಯಗಳು 5:30ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
- Mark 14:46–53 ಮಾರ್ಕನು 14:46–53ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು. ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು. ಯೇಸು ಅವರಿಗೆ-- ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತಕ್ಕೊಂಡು ಕಳ್ಳನಿಗೆ ವಿರೋಧವಾಗಿ ಬರುವಂತೆ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು. ಅಲ್ಲಿ ಒಬ್ಬಾನೊಬ್ಬ ಯೌವನಸ್ಥನು ಬರೀ ಮೈಮೇಲೆ ನಾರು ಬಟ್ಟೆಯನ್ನು ಹಾಕಿಕೊಂಡವನಾಗಿ ಆತನನ್ನು ಹಿಂಬಾಲಿಸುತ್ತಿರಲು ಯೌವನಸ್ಥರು ಅವನನ್ನು ಹಿಡಿದರು. ಆಗ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು. ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು.