Matthew · chapter 21 · verse 42
Matthew 21:42 in Kannada
ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
Yesu avarige--kattuvavaru tiraskarisida kalle mukhyavaada moolegallaayitu; mattu idu kartanindale aayitu. Adu namma drushtiyalli aashcharyavaadaddu endu barahagalalli endaadaroo neevu odalillavo?
Matthew 21:42 in English
- King James Version (KJV)
- Jesus saith unto them, Did ye never read in the scriptures, The stone which the builders rejected, the same is become the head of the corner: this is the Lord’s doing, and it is marvellous in our eyes?
- World English Bible (WEB)
- Jesus said to them, “Did you never read in the Scriptures, ‘The stone which the builders rejected was made the head of the corner. This was from the Lord. It is marvelous in our eyes’?
- American Standard Version (ASV)
- Jesus saith unto them, Did ye never read in the scriptures, The stone which the builders rejected, The same was made the head of the corner; This was from the Lord, And it is marvellous in our eyes?
- Bible in Basic English (BBE)
- Jesus says to them, Did you never see in the Writings, The stone which the builders put on one side, the same has been made the chief stone of the building: this was the Lord's doing, and it is a wonder in our eyes?
- Darby Translation (DBY)
- Jesus says to them, Have ye never read in the scriptures, The stone which they that builded rejected, this has become the corner-stone: this is of [the] Lord, and it is wonderful in our eyes?
- Webster's Bible (WBS)
- Jesus saith to them, Did ye never read in the scriptures, The stone which the builders rejected, the same is become the head of the corner: this is the Lord's doing, and it is marvelous in our eyes?
- Young's Literal Translation (YLT)
- Jesus saith to them, 'Did ye never read in the Writings, A stone that the builders disallowed, it became head of a corner; from the Lord hath this come to pass, and it is wonderful in our eyes.
Read in context
- 40ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
- 41ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
- 42ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
- 43ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
- 44ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
Cross references
- Psalm 118:22–23 ಕೀರ್ತನೆಗಳು 118:22–23ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ.
- Isaiah 28:16 ಯೆಶಾಯ 28:16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
- Acts 4:11 ಅಪೊಸ್ತಲರ ಕೃತ್ಯಗಳು 4:11ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
- 1 Peter 2:4–8 1 ಪೇತ್ರನು 2:4–8ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು. ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ. ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Ephesians 2:20 ಎಫೆಸದವರಿಗೆ 2:20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
- Romans 9:33 ರೋಮಾಪುರದವರಿಗೆ 9:33ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Luke 20:17–18 ಲೂಕನು 20:17–18ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು? ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.
- Mark 12:10–11 ಮಾರ್ಕನು 12:10–11ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನ ಕೆಲಸವೇ ಆಗಿತ್ತು. ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆಯಲ್ಲಾ ಎಂಬ ಈ ಬರಹವನ್ನು ನೀವು ಓದಲಿಲ್ಲವೋ ಎಂದು ಹೇಳಿದನು.
- Zechariah 3:8–9 ಜೆಕರ್ಯ 3:8–9ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು. ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Acts 13:40–41 ಅಪೊಸ್ತಲರ ಕೃತ್ಯಗಳು 13:40–41ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ. ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
- Ephesians 3:3–9 ಎಫೆಸದವರಿಗೆ 3:3–9ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು; (ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.) ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ. ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ. ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು. ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ
- Habakkuk 1:5 ಹಬಕ್ಕೂಕ 1:5ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ.