Matthew · chapter 22 · verse 1
Matthew 22:1 in Kannada
ಯೇಸು ತಿರಿಗಿ ಸಾಮ್ಯ ರೂಪವಾಗಿ ಅವರ ಕೂಡ ಮಾತನಾಡುತ್ತಾ--
Yesu tirigi saamya roopavaagi avara kooda maatanaaduttaa--
Matthew 22:1 in English
- King James Version (KJV)
- And Jesus answered and spake unto them again by parables, and said,
- World English Bible (WEB)
- Jesus answered and spoke to them again in parables, saying,
- American Standard Version (ASV)
- And Jesus answered and spake again in parables unto them, saying,
- Bible in Basic English (BBE)
- And Jesus, talking to them again in stories, said:
- Darby Translation (DBY)
- And Jesus answering spoke to them again in parables, saying,
- Webster's Bible (WBS)
- And Jesus answered, and spoke to them again by parables, and said,
- Young's Literal Translation (YLT)
- And Jesus answering, again spake to them in similes, saying,
Read in context
- 1ಯೇಸು ತಿರಿಗಿ ಸಾಮ್ಯ ರೂಪವಾಗಿ ಅವರ ಕೂಡ ಮಾತನಾಡುತ್ತಾ--
- 2ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.
- 3ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.
Cross references
- Matthew 20:1–16 ಮತ್ತಾಯನು 20:1–16ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ. ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು. ಮತ್ತು ಅವನು ಸುಮಾರು ಮೂರನೆಯ ತಾಸಿನಲ್ಲಿ ಹೊರಗೆಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ಸಹ ದ್ರಾಕ್ಷೇ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುವೆನು ಎಂದು ಹೇಳಿದನು. ಆಗ ಅವರು ಹೊರಟು ಹೋದರು. ಅವನು ಸುಮಾರು ಆರನೆಯ ಮತ್ತು ಒಂಭತ್ತನೆಯ ತಾಸಿನಲ್ಲಿ ತಿರಿಗಿ ಹೋಗಿ ಹಾಗೆಯೇ ಮಾಡಿದನು. ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು. ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು. ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು. ಸುಮಾರು ಹನ್ನೊಂದನೆ ಯ ತಾಸಿನಲ್ಲಿ ಕರೆಯಲ್ಪಟ್ಟವರಾದ ಪ್ರತಿಯೊಬ್ಬನು ಒಂದೊಂದು ಪಾವಲಿಯನ್ನು ಹೊಂದಿದನು. ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು. ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ-- ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು. ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ? ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು. ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು. ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
- Matthew 12:43–45 ಮತ್ತಾಯನು 12:43–45ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ. ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು. ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
- Matthew 21:28–46 ಮತ್ತಾಯನು 21:28–46ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು. ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ. ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ. ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು. ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು. ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು. ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು. ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು. ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ? ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು. ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು. ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು. ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
- Luke 8:10 ಲೂಕನು 8:10ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
- Matthew 9:15–17 ಮತ್ತಾಯನು 9:15–17ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು. ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು. ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
- Matthew 13:3–11 ಮತ್ತಾಯನು 13:3–11ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು. ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು; ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು. ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು. ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
- Luke 14:16 ಲೂಕನು 14:16ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.
- Mark 4:33–34 ಮಾರ್ಕನು 4:33–34ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು. ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.