Matthew · chapter 22 · verse 17
Matthew 22:17 in Kannada
ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
Aadadarinda-- kaisaranige kappavannu koduvadu nyaayavo nyaayavallavo? Ninage hege toruttade? Namage helu andaru.
Matthew 22:17 in English
- King James Version (KJV)
- Tell us therefore, What thinkest thou? Is it lawful to give tribute unto Caesar, or not?
- World English Bible (WEB)
- Tell us therefore, what do you think? Is it lawful to pay taxes to Caesar, or not?”
- American Standard Version (ASV)
- Tell us therefore, What thinkest thou? Is it lawful to give tribute unto Cæsar, or not?
- Bible in Basic English (BBE)
- Give us, then, your opinion of this: Is it right to give tax to Caesar, or not?
- Darby Translation (DBY)
- tell us therefore what thou thinkest: Is it lawful to give tribute to Caesar, or not?
- Webster's Bible (WBS)
- Tell us therefore, What thinkest thou? Is it lawful to give tribute to Cesar, or not?
- Young's Literal Translation (YLT)
- tell us, therefore, what dost thou think? is it lawful to give tribute to Caesar or not?'
Read in context
- 15ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
- 16ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
- 17ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
- 18ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?
- 19ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು.
Cross references
- Romans 13:6–7 ರೋಮಾಪುರದವರಿಗೆ 13:6–7ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ. ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- Luke 2:1 ಲೂಕನು 2:1ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು.
- Matthew 17:25 ಮತ್ತಾಯನು 17:25ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
- Acts 28:22 ಅಪೊಸ್ತಲರ ಕೃತ್ಯಗಳು 28:22ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
- Luke 3:1 ಲೂಕನು 3:1ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
- Nehemiah 9:37 ನೆಹೆಮೀಯ 9:37ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
- John 19:12–15 ಯೋಹಾನನು 19:12–15ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು. ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು. ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು. ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
- Acts 17:7 ಅಪೊಸ್ತಲರ ಕೃತ್ಯಗಳು 17:7ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
- Ezra 4:13 ಎಜ್ರನು 4:13ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.
- Deuteronomy 17:14–15 ಧರ್ಮೋಪದೇಶಕಾಂಡ 17:14–15ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
- Acts 25:8 ಅಪೊಸ್ತಲರ ಕೃತ್ಯಗಳು 25:8ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
- Ezra 7:24 ಎಜ್ರನು 7:24ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.