Matthew · chapter 22 · verse 36
Matthew 22:36 in Kannada
ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು.
Bodhaka ne, nyaaya pramaanadalli dodda aajnye yaavadu endu aatanannu prashnisidanu.
Matthew 22:36 in English
- King James Version (KJV)
- Master, which [is] the great commandment in the law?
- World English Bible (WEB)
- “Teacher, which is the greatest commandment in the law?”
- American Standard Version (ASV)
- Teacher, which is the great commandment in the law?
- Bible in Basic English (BBE)
- Master, which is the chief rule in the law?
- Darby Translation (DBY)
- Teacher, which is the great commandment in the law?
- Webster's Bible (WBS)
- Master, which [is] the great commandment in the law?
- Young's Literal Translation (YLT)
- 'Teacher, which [is] the great command in the Law?'
Read in context
- 34ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.
- 35ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
- 36ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು.
- 37ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
- 38ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ--
Cross references
- Mark 12:28–33 ಮಾರ್ಕನು 12:28–33ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ. ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ. ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು. ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ. ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.
- Matthew 5:19–20 ಮತ್ತಾಯನು 5:19–20ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು. ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
- Luke 11:42 ಲೂಕನು 11:42ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
- Matthew 23:23–24 ಮತ್ತಾಯನು 23:23–24ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
- Hosea 8:12 ಹೋಶೇಯ 8:12ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.