Matthew · chapter 22 · verse 4
Matthew 22:4 in Kannada
ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
Avanu tirigi bere sevakarannu kaluhisi avarige--igo, naanu autanavannu siddhamaadiddene, nanna ettugaloo kobbida pashugaloo koyyalpattive mattu ellavu galu siddhavaagive; maduvege banniri endu kareyalpattavarige heliri andanu.
Matthew 22:4 in English
- King James Version (KJV)
- Again, he sent forth other servants, saying, Tell them which are bidden, Behold, I have prepared my dinner: my oxen and [my] fatlings [are] killed, and all things [are] ready: come unto the marriage.
- World English Bible (WEB)
- Again he sent out other servants, saying, ‘Tell those who are invited, “Behold, I have prepared my dinner. My cattle and my fatlings are killed, and all things are ready. Come to the wedding feast!”’
- American Standard Version (ASV)
- Again he sent forth other servants, saying, Tell them that are bidden, Behold, I have made ready my dinner; my oxen and my fatlings are killed, and all things are ready: come to the marriage feast.
- Bible in Basic English (BBE)
- Again he sent out other servants, with orders to say to the guests, See, I have made ready my feast: my oxen and my fat beasts have been put to death, and all things are ready: come to the feast.
- Darby Translation (DBY)
- Again he sent other bondmen, saying, Say to the persons invited, Behold, I have prepared my dinner; my oxen and my fatted beasts are killed, and all things ready; come to the wedding feast.
- Webster's Bible (WBS)
- Again, he sent other servants, saying, Tell them who are invited, Behold, I have prepared my dinner: my oxen and [my] fatlings [are] killed, and all things [are] ready: come to the marriage.
- Young's Literal Translation (YLT)
- 'Again he sent forth other servants, saying, Say to those who have been called: Lo, my dinner I prepared, my oxen and the fatlings have been killed, and all things [are] ready, come ye to the marriage-feasts;
Read in context
- 2ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.
- 3ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.
- 4ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
- 5ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
- 6ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
Cross references
- Acts 13:46 ಅಪೊಸ್ತಲರ ಕೃತ್ಯಗಳು 13:46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- Matthew 21:36 ಮತ್ತಾಯನು 21:36ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
- John 6:50–57 ಯೋಹಾನನು 6:50–57ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ. ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು. ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು. ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
- 1 Corinthians 5:7–8 1 ಕೊರಿಂಥದವರಿಗೆ 5:7–8ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
- Matthew 22:8 ಮತ್ತಾಯನು 22:8ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.
- Proverbs 9:1–2 ಜ್ಞಾನೋಕ್ತಿಗಳು 9:1–2ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ. ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.
- Psalm 86:5 ಕೀರ್ತನೆಗಳು 86:5ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
- Nehemiah 9:17 ನೆಹೆಮೀಯ 9:17ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
- Luke 14:17 ಲೂಕನು 14:17ಔತಣದ ಸಮಯವಾದಾಗ ಕರೆಯಲ್ಪಟ್ಟವರಿಗೆ ಅವನು--ಎಲ್ಲವೂ ಸಿದ್ಧವಾಗಿದೆ, ಬನ್ನಿರಿ ಎಂದು ಹೇಳುವದಕ್ಕಾಗಿ ತನ್ನ ಸೇವಕನನ್ನು ಕಳುಹಿಸಿದನು.
- Luke 24:46–47 ಲೂಕನು 24:46–47ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- Acts 11:19–20 ಅಪೊಸ್ತಲರ ಕೃತ್ಯಗಳು 11:19–20ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು. ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.