Matthew · chapter 22 · verse 42
Matthew 22:42 in Kannada
ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
Kristana vishaya vaagi neevu enu nenasutteeri? Aatanu yaara maganu endu keliddakke avaru aatanige--daaveedanakumaaranu andaru.
Matthew 22:42 in English
- King James Version (KJV)
- Saying, What think ye of Christ? whose son is he? They say unto him, [The Son] of David.
- World English Bible (WEB)
- saying, “What do you think of the Christ? Whose son is he?” They said to him, “Of David.”
- American Standard Version (ASV)
- saying, What think ye of the Christ? whose son is he? They say unto him, [The son] of David.
- Bible in Basic English (BBE)
- What is your opinion of the Christ? whose son is he? They say to him, The Son of David.
- Darby Translation (DBY)
- saying, What think ye concerning the Christ? whose son is he? They say to him, David's.
- Webster's Bible (WBS)
- Saying, What think ye of Christ? whose son is he? They say to him, [The son] of David.
- Young's Literal Translation (YLT)
- saying, 'What do ye think concerning the Christ? of whom is he son?' They say to him, 'Of David.'
Read in context
- 40ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
- 41ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ--
- 42ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
- 43ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--
- 44ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
Cross references
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Matthew 16:13–17 ಮತ್ತಾಯನು 16:13–17ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು. ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು. ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು. ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು. ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
- Amos 9:11 ಆಮೋಸ 9:11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
- John 6:68–69 ಯೋಹಾನನು 6:68–69ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ. ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
- Ezekiel 34:23–24 ಯೆಹೆಜ್ಕೇಲನು 34:23–24ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
- Isaiah 7:13–14 ಯೆಶಾಯ 7:13–14ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ? ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Isaiah 11:1–4 ಯೆಶಾಯ 11:1–4ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು. ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- Matthew 1:1 ಮತ್ತಾಯನು 1:1ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
- Acts 13:22–23 ಅಪೊಸ್ತಲರ ಕೃತ್ಯಗಳು 13:22–23ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
- Luke 1:69–70 ಲೂಕನು 1:69–70ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ. ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
- Matthew 9:27 ಮತ್ತಾಯನು 9:27ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.