Matthew · chapter 22 · verse 44
Matthew 22:44 in Kannada
ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
Naanu ninna virodhigalannu paadapeethavaagi maaduva varege nanna balagadeyalli kootu kondiru endu helidanallaa.
Matthew 22:44 in English
- King James Version (KJV)
- The LORD said unto my Lord, Sit thou on my right hand, till I make thine enemies thy footstool?
- World English Bible (WEB)
- ‘The Lord said to my Lord, sit on my right hand, until I make your enemies a footstool for your feet’?
- American Standard Version (ASV)
- The Lord said unto my Lord, Sit thou on my right hand, Till I put thine enemies underneath thy feet?
- Bible in Basic English (BBE)
- The Lord said to my Lord, Be seated at my right hand, till I put under your feet all those who are against you?
- Darby Translation (DBY)
- The Lord said to my Lord, Sit on my right hand until I put thine enemies under thy feet?
- Webster's Bible (WBS)
- The LORD said to my Lord, Sit thou on my right hand, till I make thy enemies thy footstool?
- Young's Literal Translation (YLT)
- The Lord said to my lord, Sit at my right hand, till I may make thine enemies thy footstool?
Read in context
- 42ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
- 43ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--
- 44ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
- 45ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
- 46ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
Cross references
- Psalm 110:1 ಕೀರ್ತನೆಗಳು 110:1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
- Hebrews 1:13 ಇಬ್ರಿಯರಿಗೆ 1:13ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Acts 2:34–35 ಅಪೊಸ್ತಲರ ಕೃತ್ಯಗಳು 2:34–35ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.
- 1 Corinthians 15:25 1 ಕೊರಿಂಥದವರಿಗೆ 15:25ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
- Hebrews 10:12–13 ಇಬ್ರಿಯರಿಗೆ 10:12–13ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು. ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Genesis 3:15 ಆದಿಕಾಂಡ 3:15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
- Revelation 20:11–15 ಪ್ರಕಟನೆ 20:11–15ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು. ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Isaiah 63:1–6 ಯೆಶಾಯ 63:1–6ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ. ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ? ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು. ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು. ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು. ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
- Philippians 3:8 ಫಿಲಿಪ್ಪಿಯವರಿಗೆ 3:8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.