Matthew · chapter 22 · verse 6
Matthew 22:6 in Kannada
ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
Ulidavaru avana sevakarannu hididu avamaana padisi avarannu konduhaakidaru.
Matthew 22:6 in English
- King James Version (KJV)
- And the remnant took his servants, and entreated them spitefully, and slew [them].
- World English Bible (WEB)
- and the rest grabbed his servants, treated them shamefully, and killed them.
- American Standard Version (ASV)
- and the rest laid hold on his servants, and treated them shamefully, and killed them.
- Bible in Basic English (BBE)
- And the rest put violent hands on his servants, and did evil to them, and put them to death.
- Darby Translation (DBY)
- And the rest, laying hold of his bondmen, ill-treated and slew [them].
- Webster's Bible (WBS)
- And the remnant took his servants, and treated [them] spitefully, and slew [them] .
- Young's Literal Translation (YLT)
- and the rest, having laid hold on his servants, did insult and slay [them].
Read in context
- 4ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
- 5ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
- 6ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
- 7ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
- 8ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.
Cross references
- John 15:19–20 ಯೋಹಾನನು 15:19–20ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ. ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
- Matthew 21:35–39 ಮತ್ತಾಯನು 21:35–39ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು. ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
- Matthew 23:34–37 ಮತ್ತಾಯನು 23:34–37ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು. ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
- Matthew 10:22–25 ಮತ್ತಾಯನು 10:22–25ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು. ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ. ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
- Acts 5:40–41 ಅಪೊಸ್ತಲರ ಕೃತ್ಯಗಳು 5:40–41ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು. ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
- Acts 7:51–57 ಅಪೊಸ್ತಲರ ಕೃತ್ಯಗಳು 7:51–57ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ. ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು. ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು. ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು-- ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು. ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು
- Acts 8:1 ಅಪೊಸ್ತಲರ ಕೃತ್ಯಗಳು 8:1ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
- Matthew 10:12–18 ಮತ್ತಾಯನು 10:12–18ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ. ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ. ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು. ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ. ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು. ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
- Matthew 5:10–12 ಮತ್ತಾಯನು 5:10–12ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು. ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- John 16:2–3 ಯೋಹಾನನು 16:2–3ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ. ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
- 1 Thessalonians 2:14–15 1 ಥೆಸಲೊನೀಕದವರಿಗೆ 2:14–15ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ. ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
- Acts 4:1–3 ಅಪೊಸ್ತಲರ ಕೃತ್ಯಗಳು 4:1–3ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು; ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು. ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.