Matthew · chapter 22 · verse 7
Matthew 22:7 in Kannada
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
Aadare arasanu adannu keli kopodrekavullavanaagi tanna sainyagalannu kaluhisi aa kolegaararannu sanha risi avara pattanavannu suttubittanu.
Matthew 22:7 in English
- King James Version (KJV)
- But when the king heard [thereof], he was wroth: and he sent forth his armies, and destroyed those murderers, and burned up their city.
- World English Bible (WEB)
- When the king heard that, he was angry, and sent his armies, destroyed those murderers, and burned their city.
- American Standard Version (ASV)
- But the king was wroth; and he sent his armies, and destroyed those murderers, and burned their city.
- Bible in Basic English (BBE)
- But the king was angry; and he sent his armies, and those who had put his servants to death he gave to destruction, burning down their town with fire.
- Darby Translation (DBY)
- And [when] the king [heard of it he] was wroth, and having sent his forces, destroyed those murderers and burned their city.
- Webster's Bible (WBS)
- But when the king heard [of it] , he was wroth: and he sent his armies, and destroyed those murderers, and burned up their city.
- Young's Literal Translation (YLT)
- 'And the king having heard, was wroth, and having sent forth his soldiers, he destroyed those murderers, and their city he set on fire;
Read in context
- 5ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
- 6ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
- 7ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
- 8ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.
- 9ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.
Cross references
- Luke 19:27 ಲೂಕನು 19:27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
- 1 Peter 4:17–18 1 ಪೇತ್ರನು 4:17–18ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು? ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- Joel 2:25 ಯೋವೇಲ 2:25ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- 1 Thessalonians 2:16 1 ಥೆಸಲೊನೀಕದವರಿಗೆ 2:16ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Joel 3:2 ಯೋವೇಲ 3:2ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು
- Jeremiah 51:20–23 ಯೆರೆಮೀಯ 51:20–23ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ; ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ.
- Daniel 9:26 ದಾನಿಯೇಲನು 9:26ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Isaiah 13:2–5 ಯೆಶಾಯ 13:2–5ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ. ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ. ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ. ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- Deuteronomy 28:49–68 ಧರ್ಮೋಪದೇಶಕಾಂಡ 28:49–68ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು. ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು. ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು. ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು. ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು. ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ. ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ. ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Joel 2:11 ಯೋವೇಲ 2:11ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
- Luke 21:21 ಲೂಕನು 21:21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.