Matthew · chapter 23 · verse 24
Matthew 23:24 in Kannada
ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
Kuruda maargadarshakaraada neevu solle sosuvavaru mattu onte nunguvavaru.
Matthew 23:24 in English
- King James Version (KJV)
- [Ye] blind guides, which strain at a gnat, and swallow a camel.
- World English Bible (WEB)
- You blind guides, who strain out a gnat, and swallow a camel!
- American Standard Version (ASV)
- Ye blind guides, that strain out the gnat, and swallow the camel!
- Bible in Basic English (BBE)
- You blind guides, who take out a fly from your drink, but make no trouble over a camel.
- Darby Translation (DBY)
- Blind guides, who strain out the gnat, but drink down the camel.
- Webster's Bible (WBS)
- [Ye] blind guides, who strain out a gnat, and swallow a camel.
- Young's Literal Translation (YLT)
- 'Blind guides! who are straining out the gnat, and the camel are swallowing.
Read in context
- 22ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ.
- 23ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
- 24ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
- 25ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
- 26ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.
Cross references
- Matthew 19:24 ಮತ್ತಾಯನು 19:24ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
- Matthew 27:6–8 ಮತ್ತಾಯನು 27:6–8ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು. ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು. ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.
- Matthew 15:2–6 ಮತ್ತಾಯನು 15:2–6ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ? ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- Luke 6:7–10 ಲೂಕನು 6:7–10ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು. ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು. ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು. ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
- John 18:28 ಯೋಹಾನನು 18:28ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
- Matthew 23:16 ಮತ್ತಾಯನು 23:16ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
- John 18:40 ಯೋಹಾನನು 18:40ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
- Matthew 7:4 ಮತ್ತಾಯನು 7:4ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ?