Matthew · chapter 24 · verse 19
Matthew 24:19 in Kannada
ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
Aa divasagalalli garbhiniyarigoo molekudisuva koosugalidda varigoo ayyo!
Matthew 24:19 in English
- King James Version (KJV)
- And woe unto them that are with child, and to them that give suck in those days!
- World English Bible (WEB)
- But woe to those who are with child and to nursing mothers in those days!
- American Standard Version (ASV)
- But woe unto them that are with child and to them that give suck in those days!
- Bible in Basic English (BBE)
- But it will be hard for women who are with child and for those with babies at the breast in those days.
- Darby Translation (DBY)
- But woe to those that are with child, and those that give suck in those days.
- Webster's Bible (WBS)
- And woe to them that are with child, and to them that nurse infants in those days!
- Young's Literal Translation (YLT)
- 'And woe to those with child, and to those giving suck in those days;
Read in context
- 17ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;
- 18ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ.
- 19ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
- 20ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ.
- 21ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
Cross references
- Luke 23:29–30 ಲೂಕನು 23:29–30ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ. ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
- Luke 21:23 ಲೂಕನು 21:23ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
- Deuteronomy 28:53–56 ಧರ್ಮೋಪದೇಶಕಾಂಡ 28:53–56ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ
- Mark 13:17–18 ಮಾರ್ಕನು 13:17–18ಆದರೆ ಆ ದಿವಸಗಳಲ್ಲಿ ಗರ್ಭಿಣಿ ಯರಿಗೂ ಮೊಲೆಕುಡಿಸುವವರಿಗೂ ಅಯ್ಯೋ! ನಿಮ್ಮ ಪಲಾಯನವು ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.
- Lamentations 4:10 ಪ್ರಲಾಪಗಳು 4:10ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
- Lamentations 4:3–4 ಪ್ರಲಾಪಗಳು 4:3–4ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ. ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
- Hosea 13:16 ಹೋಶೇಯ 13:16ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- 2 Samuel 4:4 2 ಸಮುವೇಲನು 4:4ಆದರೆ ಸೌಲನ ಮಗನಾದ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಇಜ್ರೇಲಿನಿಂದ ಸೌಲನೂ ಯೋನಾತಾನನೂ ಸತ್ತರೆಂಬ ವರ್ತಮಾನ ಬಂದಾಗ ಅವನು ಐದು ವರುಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ ಏನಾಯಿ ತಂದರೆ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.
- 2 Kings 15:16 2 ಅರಸುಗಳು 15:16ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.