Matthew · chapter 24 · verse 21
Matthew 24:21 in Kannada
ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
Antha mahaa sankatavu lokaadiyinda indinavaregoo aagalilla, aamele endigoo aaguvadilla.
Matthew 24:21 in English
- King James Version (KJV)
- For then shall be great tribulation, such as was not since the beginning of the world to this time, no, nor ever shall be.
- World English Bible (WEB)
- for then there will be great suffering, such as has not been from the beginning of the world until now, no, nor ever will be.
- American Standard Version (ASV)
- for then shall be great tribulation, such as hath not been from the beginning of the world until now, no, nor ever shall be.
- Bible in Basic English (BBE)
- Because in those days there will be great sorrow, such as there has not been from the start of the world till now, or ever will be.
- Darby Translation (DBY)
- for then shall there be great tribulation, such as has not been from [the] beginning of [the] world until now, nor ever shall be;
- Webster's Bible (WBS)
- For then shall be great tribulation, such as hath not been since the beginning of the world to this time, no, nor ever shall be.
- Young's Literal Translation (YLT)
- for there shall be then great tribulation, such as was not from the beginning of the world till now, no, nor may be.
Read in context
- 19ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
- 20ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ.
- 21ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
- 22ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
- 23ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ.
Cross references
- Daniel 12:1 ದಾನಿಯೇಲನು 12:1ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
- Joel 2:2 ಯೋವೇಲ 2:2ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Zechariah 14:2–3 ಜೆಕರ್ಯ 14:2–3ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ. ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.
- Isaiah 66:15–16 ಯೆಶಾಯ 66:15–16ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು. ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
- Matthew 24:29 ಮತ್ತಾಯನು 24:29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
- Luke 19:43–44 ಲೂಕನು 19:43–44ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Daniel 9:26 ದಾನಿಯೇಲನು 9:26ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Isaiah 65:12–16 ಯೆಶಾಯ 65:12–16ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ. ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ; ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ. ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು. ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
- Joel 1:2 ಯೋವೇಲ 1:2ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ; ಇದು ನಿಮ್ಮ ದಿವಸಗಳಲ್ಲಾದರೂ ನಿಮ್ಮ ತಂದೆಗಳ ದಿವಸಗಳಲ್ಲಾದರೂ ಉಂಟಾಯಿತೋ?
- 1 Thessalonians 2:16 1 ಥೆಸಲೊನೀಕದವರಿಗೆ 2:16ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.