Matthew · chapter 24 · verse 30
Matthew 24:30 in Kannada
ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
Aaga manushyakumaarana soochaneyu aakaashadalli kaanuvadu; bhoomiya ellaa gotradavaru golaaduvaru. Mattu manushyakumaaranu aakaashada meghagalalli shaktiyodaneyoo mahaa prabhaavadondigoo baruvadannu avaru nodu varu.
Matthew 24:30 in English
- King James Version (KJV)
- And then shall appear the sign of the Son of man in heaven: and then shall all the tribes of the earth mourn, and they shall see the Son of man coming in the clouds of heaven with power and great glory.
- World English Bible (WEB)
- and then the sign of the Son of Man will appear in the sky. Then all the tribes of the earth will mourn, and they will see the Son of Man coming on the clouds of the sky with power and great glory.
- American Standard Version (ASV)
- and then shall appear the sign of the Son of man in heaven: and then shall all the tribes of the earth mourn, and they shall see the Son of man coming on the clouds of heaven with power and great glory.
- Bible in Basic English (BBE)
- And then the sign of the Son of man will be seen in heaven: and then all the nations of the earth will have sorrow, and they will see the Son of man coming on the clouds of heaven with power and great glory.
- Darby Translation (DBY)
- And then shall appear the sign of the Son of man in heaven; and then shall all the tribes of the land lament, and they shall see the Son of man coming on the clouds of heaven with power and great glory.
- Webster's Bible (WBS)
- And then shall appear the sign of the Son of man in heaven: and then shall all the tribes of the earth mourn, and they shall see the Son of man coming in the clouds of heaven with power and great glory.
- Young's Literal Translation (YLT)
- and then shall appear the sign of the Son of Man in the heaven; and then shall all the tribes of the earth smite the breast, and they shall see the Son of Man coming upon the clouds of the heaven, with power and much glory;
Read in context
- 28ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.
- 29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
- 30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
- 31ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
- 32ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;
Cross references
- Revelation 1:7 ಪ್ರಕಟನೆ 1:7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
- Daniel 7:13 ದಾನಿಯೇಲನು 7:13ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
- Luke 21:27 ಲೂಕನು 21:27ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
- Acts 1:11 ಅಪೊಸ್ತಲರ ಕೃತ್ಯಗಳು 1:11ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
- Matthew 26:64 ಮತ್ತಾಯನು 26:64ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Matthew 16:27–28 ಮತ್ತಾಯನು 16:27–28ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು. ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Mark 13:26 ಮಾರ್ಕನು 13:26ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
- 2 Thessalonians 1:7 2 ಥೆಸಲೊನೀಕದವರಿಗೆ 1:7ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
- Matthew 24:3 ಮತ್ತಾಯನು 24:3ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
- Luke 22:69 ಲೂಕನು 22:69ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು.
- Mark 14:62–64 ಮಾರ್ಕನು 14:62–64ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು. ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ? ನೀವು ಈ ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು