Matthew · chapter 24 · verse 37
Matthew 24:37 in Kannada
ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
Aadare nohana divasagalu iddanteye manushya kumaarana baronavoo iruvadu.
Matthew 24:37 in English
- King James Version (KJV)
- But as the days of Noe [were], so shall also the coming of the Son of man be.
- World English Bible (WEB)
- As the days of Noah were, so will the coming of the Son of Man be.
- American Standard Version (ASV)
- And as [were] the days of Noah, so shall be the coming of the Son of man.
- Bible in Basic English (BBE)
- And as were the days of Noah, so will be the coming of the Son of man.
- Darby Translation (DBY)
- But as the days of Noe, so also shall be the coming of the Son of man.
- Webster's Bible (WBS)
- But as the days of Noah [were] , so will also the coming of the Son of man be.
- Young's Literal Translation (YLT)
- and as the days of Noah — so shall be also the presence of the Son of Man;
Read in context
- 35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- 36ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
- 37ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
- 38ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
- 39ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
Cross references
- Luke 17:26–27 ಲೂಕನು 17:26–27ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು. ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
- Genesis 6:1–7 ಆದಿಕಾಂಡ 6:1–7ತರುವಾಯ ಭೂಮಿಯ ಮೇಲೆ ಜನರು ಹೆಚ್ಚುವದಕ್ಕೆ ಆರಂಭಿಸಿದಾಗ ಅವರಿಗೆ ಕುಮಾರ್ತೆಯರು ಹುಟ್ಟಿದರು. ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು. ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು. ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು. ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು. ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು. ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- 2 Peter 2:5 2 ಪೇತ್ರನು 2:5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
- 2 Peter 3:6 2 ಪೇತ್ರನು 3:6ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.
- Matthew 24:39 ಮತ್ತಾಯನು 24:39ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
- 1 Peter 3:20–21 1 ಪೇತ್ರನು 3:20–21ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು. ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Genesis 7:6–23 ಆದಿಕಾಂಡ 7:6–23ಜಲಪ್ರಳಯವು ಭೂಮಿಯ ಮೇಲೆ ಉಂಟಾದಾಗ ನೋಹನು ಆರುನೂರು ವರುಷದವನಾಗಿದ್ದನು. ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು. ಶುದ್ಧ ಪ್ರಾಣಿಗಳಲ್ಲಿಯೂ ಅಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿ ಗಳಲ್ಲಿಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವೂ ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು. ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು. ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು. ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು. ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್ ಹಾಮ್ ಯೆಫೆತ್ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು. ಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು. ಹೀಗೆ ಜೀವಶ್ವಾಸವಿರುವ ಎಲ್ಲಾ ಶರೀರಗಳಲ್ಲಿಯೂ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು. ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು. ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು. ನೀರು ಪ್ರಬಲವಾಗಿ ಭೂಮಿಯ ಮೇಲೆ ಬಹಳವಾಗಿ ಹೆಚ್ಚಿದಾಗ ಆ ನಾವೆಯು ನೀರಿನ ಮೇಲೆ ಹೋಯಿತು. ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು. ನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು. ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು. ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು. ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
- Job 22:15–17 ಯೋಬನು 22:15–17ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ? ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು. ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.