Matthew · chapter 24 · verse 42
Matthew 24:42 in Kannada
ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
Nimma kartanu yaava galigeyalli baru ttaano nimage gottillavaadadarinda echchara vaagirri.
Matthew 24:42 in English
- King James Version (KJV)
- Watch therefore: for ye know not what hour your Lord doth come.
- World English Bible (WEB)
- Watch therefore, for you don’t know in what hour your Lord comes.
- American Standard Version (ASV)
- Watch therefore: for ye know not on what day your Lord cometh.
- Bible in Basic English (BBE)
- Be watching, then! for you have no knowledge on what day your Lord will come.
- Darby Translation (DBY)
- Watch therefore, for ye know not in what hour your Lord comes.
- Webster's Bible (WBS)
- Watch therefore; for ye know not what hour your Lord cometh.
- Young's Literal Translation (YLT)
- 'Watch ye therefore, because ye have not known in what hour your Lord doth come;
Read in context
- 40ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು.
- 41ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.
- 42ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
- 43ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
- 44ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
Cross references
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- 1 Thessalonians 5:6 1 ಥೆಸಲೊನೀಕದವರಿಗೆ 5:6ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
- Matthew 25:13 ಮತ್ತಾಯನು 25:13ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
- Revelation 16:15 ಪ್ರಕಟನೆ 16:15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
- Matthew 24:36 ಮತ್ತಾಯನು 24:36ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
- 1 Corinthians 16:13 1 ಕೊರಿಂಥದವರಿಗೆ 16:13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- Luke 12:35–40 ಲೂಕನು 12:35–40ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ. ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ. ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು. ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು. ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ. ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.
- Matthew 24:44 ಮತ್ತಾಯನು 24:44ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
- Romans 13:11 ರೋಮಾಪುರದವರಿಗೆ 13:11ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
- Matthew 26:38–41 ಮತ್ತಾಯನು 26:38–41ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು. ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು. ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ? ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Revelation 3:2–3 ಪ್ರಕಟನೆ 3:2–3ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ. ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.