Matthew · chapter 24 · verse 8
Matthew 24:8 in Kannada
ಇವೆಲ್ಲವುಗಳು ಸಂಕಟಗಳ ಆರಂಭವು.
Ivellavugalu sankatagala aarambhavu.
Matthew 24:8 in English
- King James Version (KJV)
- All these [are] the beginning of sorrows.
- World English Bible (WEB)
- But all these things are the beginning of birth pains.
- American Standard Version (ASV)
- But all these things are the beginning of travail.
- Bible in Basic English (BBE)
- But all these things are the first of the troubles.
- Darby Translation (DBY)
- But all these [are the] beginning of throes.
- Webster's Bible (WBS)
- All these [are] the beginning of sorrows.
- Young's Literal Translation (YLT)
- and all these [are] the beginning of sorrows;
Read in context
- 6ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.
- 7ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
- 8ಇವೆಲ್ಲವುಗಳು ಸಂಕಟಗಳ ಆರಂಭವು.
- 9ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
- 10ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
Cross references
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- 1 Peter 4:17–18 1 ಪೇತ್ರನು 4:17–18ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು? ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- Deuteronomy 28:59 ಧರ್ಮೋಪದೇಶಕಾಂಡ 28:59ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
- Isaiah 10:4 ಯೆಶಾಯ 10:4ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Isaiah 9:17 ಯೆಶಾಯ 9:17ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- Isaiah 9:21 ಯೆಶಾಯ 9:21ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Leviticus 26:18–29 ಯಾಜಕಕಾಂಡ 26:18–29ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು. ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು. ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು. ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು. ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು. ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ. ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ. ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು. ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ.
- Isaiah 9:12 ಯೆಶಾಯ 9:12ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.