Matthew · chapter 25 · verse 1
Matthew 25:1 in Kannada
ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
Idallade paraloka raajyavu tamma deepagalannu takkondu madalinga nannu edurugolluvadakkaagi horatuhoda hattumandi kanyeyarige holikeyaagiruvadu.
Matthew 25:1 in English
- King James Version (KJV)
- Then shall the kingdom of heaven be likened unto ten virgins, which took their lamps, and went forth to meet the bridegroom.
- World English Bible (WEB)
- “Then the Kingdom of Heaven will be like ten virgins who took their lamps and went out to meet the bridegroom.
- American Standard Version (ASV)
- Then shall the kingdom of heaven be likened unto ten virgins, who took their lamps, and went forth to meet the bridegroom.
- Bible in Basic English (BBE)
- Then the kingdom of heaven will be like ten virgins, the friends of the bride, who took their lights, and went out with the purpose of meeting the husband.
- Darby Translation (DBY)
- Then shall the kingdom of the heavens be made like to ten virgins that having taken their torches, went forth to meet the bridegroom.
- Webster's Bible (WBS)
- Then shall the kingdom of heaven be likened to ten virgins, who took their lamps, and went forth to meet the bridegroom.
- Young's Literal Translation (YLT)
- 'Then shall the reign of the heavens be likened to ten virgins, who, having taken their lamps, went forth to meet the bridegroom;
Read in context
- 1ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
- 2ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.
- 3ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ,
Cross references
- Luke 12:35–36 ಲೂಕನು 12:35–36ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ. ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ.
- Matthew 24:42–51 ಮತ್ತಾಯನು 24:42–51ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ. ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ. ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ. ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು? ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು. ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದುಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Revelation 19:7 ಪ್ರಕಟನೆ 19:7ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
- Philippians 2:15–16 ಫಿಲಿಪ್ಪಿಯವರಿಗೆ 2:15–16ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ. ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
- John 3:29 ಯೋಹಾನನು 3:29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
- Revelation 21:9 ಪ್ರಕಟನೆ 21:9ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.
- Isaiah 54:5 ಯೆಶಾಯ 54:5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
- Matthew 13:24 ಮತ್ತಾಯನು 13:24ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
- Revelation 21:2 ಪ್ರಕಟನೆ 21:2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
- Matthew 22:2 ಮತ್ತಾಯನು 22:2ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.
- Titus 2:13 ತೀತನಿಗೆ 2:13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
- Revelation 14:4 ಪ್ರಕಟನೆ 14:4ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.