Matthew · chapter 25 · verse 10
Matthew 25:10 in Kannada
ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
Avaru kondukolluvadakke hodaaga madalinganu bandanu. Aaga siddhavaagi ddavaru maduvege aatanondige olakke hodaru; taruvaaya baagalu muchchalaayitu.
Matthew 25:10 in English
- King James Version (KJV)
- And while they went to buy, the bridegroom came; and they that were ready went in with him to the marriage: and the door was shut.
- World English Bible (WEB)
- While they went away to buy, the bridegroom came, and those who were ready went in with him to the wedding feast, and the door was shut.
- American Standard Version (ASV)
- And while they went away to buy, the bridegroom came; and they that were ready went in with him to the marriage feast: and the door was shut.
- Bible in Basic English (BBE)
- And while they went to get oil, the master came; and those who were ready went in with him to the feast: and the door was shut.
- Darby Translation (DBY)
- But as they went away to buy, the bridegroom came, and the [ones that were] ready went in with him to the wedding feast, and the door was shut.
- Webster's Bible (WBS)
- And while they were going to buy, the bridegroom came; and they that were ready, went in with him to the marriage, and the door was shut.
- Young's Literal Translation (YLT)
- 'And while they are going away to buy, the bridegroom came, and those ready went in with him to the marriage-feasts, and the door was shut;
Read in context
- 8ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
- 9ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
- 10ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
- 11ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.
- 12ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Cross references
- Luke 13:25 ಲೂಕನು 13:25ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
- Luke 12:36–37 ಲೂಕನು 12:36–37ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ. ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- Matthew 24:44 ಮತ್ತಾಯನು 24:44ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
- Genesis 7:16 ಆದಿಕಾಂಡ 7:16ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
- Hebrews 3:18–19 ಇಬ್ರಿಯರಿಗೆ 3:18–19ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ. ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- 2 Timothy 4:8 2 ತಿಮೊಥೆಯನಿಗೆ 4:8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- Amos 8:12–13 ಆಮೋಸ 8:12–13ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು. ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
- Psalm 95:11 ಕೀರ್ತನೆಗಳು 95:11ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Revelation 22:20 ಪ್ರಕಟನೆ 22:20ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Matthew 25:6 ಮತ್ತಾಯನು 25:6ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
- Matthew 25:20–23 ಮತ್ತಾಯನು 25:20–23ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು. ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.