Matthew · chapter 25 · verse 17
Matthew 25:17 in Kannada
ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು.
Ade prakaara eradu hondidavanu saha bere eradannu sampaadisidanu.
Matthew 25:17 in English
- King James Version (KJV)
- And likewise he that [had received] two, he also gained other two.
- World English Bible (WEB)
- In the same way, he also who got the two gained another two.
- American Standard Version (ASV)
- In like manner he also that [received] the two gained other two.
- Bible in Basic English (BBE)
- In the same way he who had been given the two got two more.
- Darby Translation (DBY)
- In like manner also he that [had received] the two, [he also] gained two others.
- Webster's Bible (WBS)
- And likewise he that [had received] two, he also gained other two.
- Young's Literal Translation (YLT)
- in like manner also he who [received] the two, he gained, also he, other two;
Read in context
- 15ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
- 16ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
- 17ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು.
- 18ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
- 19ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.
Cross references
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- Ephesians 5:16 ಎಫೆಸದವರಿಗೆ 5:16ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.
- Mark 14:3–8 ಮಾರ್ಕನು 14:3–8ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು. ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ? ಇದನ್ನು ಮುನ್ನೂರು (ಪೆನ್ಸ್) ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು. ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ. ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ. ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
- Galatians 6:9–10 ಗಲಾತ್ಯದವರಿಗೆ 6:9–10ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು. ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- Acts 10:2 ಅಪೊಸ್ತಲರ ಕೃತ್ಯಗಳು 10:2ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
- 2 Corinthians 9:11–14 2 ಕೊರಿಂಥದವರಿಗೆ 9:11–14ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು. ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
- Acts 11:29–30 ಅಪೊಸ್ತಲರ ಕೃತ್ಯಗಳು 11:29–30ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು. ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
- 1 Peter 4:10 1 ಪೇತ್ರನು 4:10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
- 2 Timothy 1:16–18 2 ತಿಮೊಥೆಯನಿಗೆ 1:16–18ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ. ಆದರೆ ಅವನು ರೋಮ್ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ. ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- Acts 9:36–39 ಅಪೊಸ್ತಲರ ಕೃತ್ಯಗಳು 9:36–39ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು. ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು. ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು. ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
- 1 Kings 18:3–4 1 ಅರಸುಗಳು 18:3–4ಆಗ ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. (ಓಬದ್ಯನು ಕರ್ತನಿಗೆ ಬಹಳ ಭಯಪಡುವವನಾಗಿದ್ದನು. ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)