Matthew · chapter 25 · verse 19
Matthew 25:19 in Kannada
ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.
Bahukaalavaada mele aa sevakara yaja maananu bandu avarinda lekkaa tegedukondanu.
Matthew 25:19 in English
- King James Version (KJV)
- After a long time the lord of those servants cometh, and reckoneth with them.
- World English Bible (WEB)
- “Now after a long time the lord of those servants came, and settled accounts with them.
- American Standard Version (ASV)
- Now after a long time the lord of those servants cometh, and maketh a reckoning with them.
- Bible in Basic English (BBE)
- Now after a long time the lord of those servants comes, and makes up his account with them.
- Darby Translation (DBY)
- And after a long time the lord of those bondmen comes and reckons with them.
- Webster's Bible (WBS)
- After a long time the lord of those servants cometh, and reckoneth with them.
- Young's Literal Translation (YLT)
- 'And after a long time cometh the lord of those servants, and taketh reckoning with them;
Read in context
- 17ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು.
- 18ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
- 19ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.
- 20ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.
- 21ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
Cross references
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- 1 Corinthians 3:12–15 1 ಕೊರಿಂಥದವರಿಗೆ 3:12–15ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು. ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು; ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವದು; ತಾನಾದರೋ ರಕ್ಷಣೆ ಹೊಂದುವನು. ಆದರೂ ಬೆಂಕಿಯೊಳಗಿಂದ ತಪ್ಪಿಸಿ ಕೊಂಡವನ ಹಾಗಿರುವನು.
- Romans 14:7–12 ರೋಮಾಪುರದವರಿಗೆ 14:7–12ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ. ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ. ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು. ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ. ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ. ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
- Luke 16:1–2 ಲೂಕನು 16:1–2ತರುವಾಯ ಆತನು ತನ್ನ ಶಿಷ್ಯರಿಗೂ ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
- Matthew 18:23–24 ಮತ್ತಾಯನು 18:23–24ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.
- Luke 16:19–31 ಲೂಕನು 16:19–31ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು. ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ. ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು. ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು. ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು. ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು. ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
- Matthew 24:48 ಮತ್ತಾಯನು 24:48ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
- Matthew 25:5 ಮತ್ತಾಯನು 25:5ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
- James 3:1 ಯಾಕೋಬನು 3:1ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.