Matthew · chapter 25 · verse 29
Matthew 25:29 in Kannada
ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.
Idda prati yobbanige kodalpaduvadu mattu avanige samruddhi yaaguvadu; illadavana kadeyinda avanige iddaddoo tegeyalpaduvadu.
Matthew 25:29 in English
- King James Version (KJV)
- For unto every one that hath shall be given, and he shall have abundance: but from him that hath not shall be taken away even that which he hath.
- World English Bible (WEB)
- For to everyone who has will be given, and he will have abundance, but from him who doesn’t have, even that which he has will be taken away.
- American Standard Version (ASV)
- For unto every one that hath shall be given, and he shall have abundance: but from him that hath not, even that which he hath shall be taken away.
- Bible in Basic English (BBE)
- For to everyone who has will be given, and he will have more: but from him who has not, even what he has will be taken away.
- Darby Translation (DBY)
- for to every one that has shall be given, and he shall be in abundance; but from him that has not, that even which he has shall be taken from him.
- Webster's Bible (WBS)
- For to every one that hath shall be given, and he shall have abundance: but from him that hath not shall be taken away even that which he hath.
- Young's Literal Translation (YLT)
- for to every one having shall be given, and he shall have overabundance, and from him who is not having, even that which he hath shall be taken from him;
Read in context
- 27ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.
- 28ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ.
- 29ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.
- 30ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.
- 31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
Cross references
- Luke 8:18 ಲೂಕನು 8:18ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
- Mark 4:25 ಮಾರ್ಕನು 4:25ಯಾಕಂ ದರೆ ಯಾವನಿಗೆ ಇದೆಯೋ ಅವನಿಗೆ ಕೊಡಲ್ಪಡುವದು; ಯಾವನಿಗೆ ಇಲ್ಲವೋ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು ಎಂದು ಹೇಳಿದನು.
- Matthew 13:12 ಮತ್ತಾಯನು 13:12ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
- Luke 19:25–26 ಲೂಕನು 19:25–26(ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.) ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.
- John 15:2 ಯೋಹಾನನು 15:2ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
- Luke 10:42 ಲೂಕನು 10:42ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- Revelation 2:5 ಪ್ರಕಟನೆ 2:5ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
- Luke 16:1–3 ಲೂಕನು 16:1–3ತರುವಾಯ ಆತನು ತನ್ನ ಶಿಷ್ಯರಿಗೂ ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು. ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.
- Luke 16:9–12 ಲೂಕನು 16:9–12ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು. ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ. ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು? ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
- Lamentations 2:6 ಪ್ರಲಾಪಗಳು 2:6ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.
- Luke 16:20–25 ಲೂಕನು 16:20–25ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- Luke 12:19–21 ಲೂಕನು 12:19–21ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.