Matthew · chapter 26 · verse 32
Matthew 26:32 in Kannada
ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.
Aadare naanu edda mele nimaginta munchita vaagi galilaayakke hoguvenu andanu.
Matthew 26:32 in English
- King James Version (KJV)
- But after I am risen again, I will go before you into Galilee.
- World English Bible (WEB)
- But after I am raised up, I will go before you into Galilee.”
- American Standard Version (ASV)
- But after I am raised up, I will go before you into Galilee.
- Bible in Basic English (BBE)
- But after I am come back from the dead, I will go before you into Galilee.
- Darby Translation (DBY)
- But after that I shall be risen, I will go before you to Galilee.
- Webster's Bible (WBS)
- But after I am risen again, I will go before you into Galilee.
- Young's Literal Translation (YLT)
- but, after my having risen, I will go before you to Galilee.'
Read in context
- 30ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
- 31ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
- 32ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.
- 33ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
- 34ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
Cross references
- Matthew 28:10 ಮತ್ತಾಯನು 28:10ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
- Luke 18:33–34 ಲೂಕನು 18:33–34ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು. ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
- Matthew 28:16 ಮತ್ತಾಯನು 28:16ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
- Matthew 20:19 ಮತ್ತಾಯನು 20:19ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
- Mark 16:7 ಮಾರ್ಕನು 16:7ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.
- Matthew 16:21 ಮತ್ತಾಯನು 16:21ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- Matthew 27:63–64 ಮತ್ತಾಯನು 27:63–64ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ. ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
- Mark 14:28 ಮಾರ್ಕನು 14:28ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗು ವೆನು ಎಂದು ಹೇಳಿದನು.
- Mark 9:9–10 ಮಾರ್ಕನು 9:9–10ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು. ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು.
- John 21:1–14 ಯೋಹಾನನು 21:1–14ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ-- ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು. ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ. ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ. ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು. ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು. ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು). ಉಳಿದ ಶಿಷ್ಯರು ವಿಾನುಗಳಿದ್ದ ಬಲೆಯನ್ನು ಎಳೆಯುತ್ತಾ ಒಂದು ಚಿಕ್ಕ ದೋಣಿಯಲ್ಲಿ ಬಂದರು; (ಯಾಕಂದರೆ ಅವರು ದಡದಿಂದ ದೂರವಿರಲಿಲ್ಲ; ಆದರೆ ಅದು ಇನ್ನೂರು ಮೊಳ ದಷ್ಟಿತ್ತು). ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು. ಯೇಸು ಅವರಿಗೆ--ನೀವು ಈಗ ಹಿಡಿದ ವಿಾನುಗಳಲ್ಲಿ ಕೆಲ ವನ್ನು ತನ್ನಿರಿ ಅಂದನು. ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ. ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ. ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು. ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.
- Matthew 28:6–7 ಮತ್ತಾಯನು 28:6–7ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ. ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
- 1 Corinthians 15:6 1 ಕೊರಿಂಥದವರಿಗೆ 15:6ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.