Matthew · chapter 26 · verse 38
Matthew 26:38 in Kannada
ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
Aatanu avarige--nanna praanavu maranahonduvashtu ati duhkhakke olagaagide; neevu ille iddu nannodane echcharavaagirri andanu.
Matthew 26:38 in English
- King James Version (KJV)
- Then saith he unto them, My soul is exceeding sorrowful, even unto death: tarry ye here, and watch with me.
- World English Bible (WEB)
- Then Jesus said to them, “My soul is exceedingly sorrowful, even to death. Stay here and watch with me.”
- American Standard Version (ASV)
- Then saith he unto them, My soul is exceeding sorrowful, even unto death: abide ye here, and watch with me.
- Bible in Basic English (BBE)
- Then says he to them, My soul is very sad, even to death: keep watch with me here.
- Darby Translation (DBY)
- Then he says to them, My soul is very sorrowful even unto death; remain here and watch with me.
- Webster's Bible (WBS)
- Then saith he to them, My soul is exceeding sorrowful, even to death: tarry ye here, and watch with me.
- Young's Literal Translation (YLT)
- then saith he to them, 'Exceedingly sorrowful is my soul — unto death; abide ye here, and watch with me.'
Read in context
- 36ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.
- 37ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.
- 38ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
- 39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- 40ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?
Cross references
- John 12:27 ಯೋಹಾನನು 12:27ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- Matthew 26:40–41 ಮತ್ತಾಯನು 26:40–41ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ? ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Matthew 25:13 ಮತ್ತಾಯನು 25:13ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- Psalm 88:14–16 ಕೀರ್ತನೆಗಳು 88:14–16ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ? ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Job 6:2–4 ಯೋಬನು 6:2–4ನನ್ನ ವ್ಯಥೆಯನ್ನೆಲ್ಲಾ ತೂಗಿದರೆ, ನನ್ನ ಶ್ರಮೆಯನ್ನು ತ್ರಾಸಿನಲ್ಲಿಟ್ಟರೆ ಲೇಸು. ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು. ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.