Matthew · chapter 26 · verse 41
Matthew 26:41 in Kannada
ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
Neevu shodhanege olagaa gadante echcharavaagiddu praarthisiri; aatmavu siddhavaagide nijave; aadare shareeravu balaheena vaagide andanu.
Matthew 26:41 in English
- King James Version (KJV)
- Watch and pray, that ye enter not into temptation: the spirit indeed [is] willing, but the flesh [is] weak.
- World English Bible (WEB)
- Watch and pray, that you don’t enter into temptation. The spirit indeed is willing, but the flesh is weak.”
- American Standard Version (ASV)
- Watch and pray, that ye enter not into temptation: the spirit indeed is willing, but the flesh is weak.
- Bible in Basic English (BBE)
- Keep watch with prayer, so that you may not be put to the test: the spirit truly is ready, but the flesh is feeble.
- Darby Translation (DBY)
- Watch and pray, that ye enter not into temptation: the spirit indeed [is] ready, but the flesh weak.
- Webster's Bible (WBS)
- Watch and pray, that ye enter not into temptation: the spirit indeed [is] willing, but the flesh [is] weak.
- Young's Literal Translation (YLT)
- watch, and pray, that ye may not enter into temptation: the spirit indeed is forward, but the flesh weak.'
Read in context
- 39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- 40ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?
- 41ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
- 42ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
- 43ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು.
Cross references
- Luke 22:46 ಲೂಕನು 22:46ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
- Mark 14:38 ಮಾರ್ಕನು 14:38ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
- Ephesians 6:18 ಎಫೆಸದವರಿಗೆ 6:18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Revelation 16:15 ಪ್ರಕಟನೆ 16:15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
- Galatians 5:16–17 ಗಲಾತ್ಯದವರಿಗೆ 5:16–17ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ. ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- 1 Corinthians 16:13 1 ಕೊರಿಂಥದವರಿಗೆ 16:13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- Romans 7:18–25 ರೋಮಾಪುರದವರಿಗೆ 7:18–25ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು. ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ. ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ. ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ. ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
- Matthew 24:42 ಮತ್ತಾಯನು 24:42ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.