Matthew · chapter 26 · verse 6
Matthew 26:6 in Kannada
ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದನು.
Yesu bethaanyadalli kushtharogiyaada seemonana maneyalliddanu.
Matthew 26:6 in English
- King James Version (KJV)
- Now when Jesus was in Bethany, in the house of Simon the leper,
- World English Bible (WEB)
- Now when Jesus was in Bethany, in the house of Simon the leper,
- American Standard Version (ASV)
- Now when Jesus was in Bethany, in the house of Simon the leper,
- Bible in Basic English (BBE)
- Now when Jesus was in Bethany in the house of Simon the leper,
- Darby Translation (DBY)
- But Jesus being in Bethany, in Simon the leper's house,
- Webster's Bible (WBS)
- Now when Jesus was in Bethany, in the house of Simon the leper,
- Young's Literal Translation (YLT)
- And Jesus having been in Bethany, in the house of Simon the leper,
Read in context
- 4ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- 5ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
- 6ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದನು.
- 7ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು.
- 8ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ?
Cross references
- Mark 14:3–9 ಮಾರ್ಕನು 14:3–9ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು. ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ? ಇದನ್ನು ಮುನ್ನೂರು (ಪೆನ್ಸ್) ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು. ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ. ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ. ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.
- John 12:1–8 ಯೋಹಾನನು 12:1–8ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು. ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು. ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು. ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು-- ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು. ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ, ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು. ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ. ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.
- Luke 7:37–39 ಲೂಕನು 7:37–39ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು. ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
- John 11:1–2 ಯೋಹಾನನು 11:1–2ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು. (ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು).
- Matthew 21:17 ಮತ್ತಾಯನು 21:17ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
- Mark 11:12 ಮಾರ್ಕನು 11:12ಮರುದಿವಸ ಅವರು ಬೇಥಾನ್ಯದಿಂದ ಬರುತ್ತಿ ದ್ದಾಗ ಆತನು ಹಸಿದಿದ್ದನು;