Matthew · chapter 26 · verse 62
Matthew 26:62 in Kannada
ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು.
Mahaayaajakaru eddu aatanige--neenu enoo uttara koduvadi llavo? Ivaru ninage virodhavaagi saakshi heluvadu enu andanu.
Matthew 26:62 in English
- King James Version (KJV)
- And the high priest arose, and said unto him, Answerest thou nothing? what [is it which] these witness against thee?
- World English Bible (WEB)
- The high priest stood up and said to him, “Have you no answer? What is this that these testify against you?”
- American Standard Version (ASV)
- And the high priest stood up, and said unto him, Answerest thou nothing? what is it which these witness against thee?
- Bible in Basic English (BBE)
- And the high priest got up and said to him, Have you no answer? what is it which these say against you?
- Darby Translation (DBY)
- And the high priest standing up said to him, Answerest thou nothing? What do these witness against thee?
- Webster's Bible (WBS)
- And the high priest arose, and said to him, Answerest thou nothing, what [is it which] these testify against thee?
- Young's Literal Translation (YLT)
- And the chief priest having stood up, said to him, 'Nothing thou dost answer! what do these witness against thee?
Read in context
- 60ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು--
- 61ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
- 62ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು.
- 63ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
- 64ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Cross references
- John 18:19–24 ಯೋಹಾನನು 18:19–24ತರುವಾಯ ಮಹಾಯಾಜಕನು ಆತನ ಶಿಷ್ಯರ ವಿಷಯವಾಗಿಯೂ ಆತನ ಬೋಧನೆಯ ವಿಷಯವಾಗಿಯೂ ಯೇಸುವನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ. ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು. ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು. ಯೇಸು ಅವನಿಗೆ--ನಾನು ಕೆಟ್ಟದ್ದನ್ನು ಮಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೇದನ್ನು ಮಾತನಾಡಿದ್ದರೆ ನೀನು ನನ್ನನ್ನು ಯಾಕೆ ಹೊಡೆಯುತ್ತೀ ಅಂದನು. ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
- John 19:9–11 ಯೋಹಾನನು 19:9–11ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ. ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು. ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
- Matthew 27:12–14 ಮತ್ತಾಯನು 27:12–14ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ. ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು. ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.
- Luke 23:9 ಲೂಕನು 23:9ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ.
- Mark 14:60 ಮಾರ್ಕನು 14:60ಆಗ ಮಹಾಯಾಜಕನು ಎದ್ದು ನಡುವೆ ನಿಂತು ಯೇಸುವಿಗೆ--ನೀನು ಏನೂ ಉತ್ತರಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು ಎಂದು ಕೇಳಿದನು.