Matthew · chapter 26 · verse 68
Matthew 26:68 in Kannada
ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.
Kristane, ninnannu hodedavaru yaaru? Namage pravaadane helu andaru.
Matthew 26:68 in English
- King James Version (KJV)
- Saying, Prophesy unto us, thou Christ, Who is he that smote thee?
- World English Bible (WEB)
- saying, “Prophesy to us, you Christ! Who hit you?”
- American Standard Version (ASV)
- saying, Prophesy unto us, thou Christ: who is he that struck thee?
- Bible in Basic English (BBE)
- Be a prophet, O Christ, and say who gave you a blow!
- Darby Translation (DBY)
- saying, Prophesy to us, Christ, Who is it who struck thee?
- Webster's Bible (WBS)
- Saying, Prophesy to us, thou Christ, Who is he that smote thee?
- Young's Literal Translation (YLT)
- saying, 'Declare to us, O Christ, who he is that struck thee?'
Read in context
- 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.
- 67ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
- 68ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.
- 69ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.
- 70ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು.
Cross references
- Luke 22:63–65 ಲೂಕನು 22:63–65ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು. ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು. ಅವರು ಆತನಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳ ನ್ನಾಡಿದರು.
- Mark 14:65 ಮಾರ್ಕನು 14:65ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು.
- 1 Peter 2:4–8 1 ಪೇತ್ರನು 2:4–8ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು. ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ. ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Mark 15:18–19 ಮಾರ್ಕನು 15:18–19ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು. ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು.
- John 19:14–15 ಯೋಹಾನನು 19:14–15ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು. ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
- Genesis 37:19–20 ಆದಿಕಾಂಡ 37:19–20ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ; ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Judges 16:25 ನ್ಯಾಯಸ್ಥಾಪಕರು 16:25ತರುವಾಯ ಅವರ ಹೃದಯಗಳು ಸಂಭ್ರಮವಾಗಿ ರುವಾಗ--ನಮ್ಮ ಮುಂದೆ ವಿನೋದ ಮಾಡುವ ಹಾಗೆ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರತಂದಾಗ ಅವನು ಅವರ ಮುಂದೆ ವಿನೋದ ಮಾಡಿದನು; ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.
- John 19:2–3 ಯೋಹಾನನು 19:2–3ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ-- ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು.
- Matthew 27:28–29 ಮತ್ತಾಯನು 27:28–29ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು. ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
- Matthew 27:39–44 ಮತ್ತಾಯನು 27:39–44ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ-- ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು. ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ-- ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು. ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.