Matthew · chapter 26 · verse 72
Matthew 26:72 in Kannada
ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು.
Aaga avanu pramaanamaadi--naanu aa manushyanannu ariyenu endu tirigi allagale danu.
Matthew 26:72 in English
- King James Version (KJV)
- And again he denied with an oath, I do not know the man.
- World English Bible (WEB)
- Again he denied it with an oath, “I don’t know the man.”
- American Standard Version (ASV)
- And again he denied with an oath, I know not the man.
- Bible in Basic English (BBE)
- And again he said with an oath, I have no knowledge of the man.
- Darby Translation (DBY)
- And again he denied with an oath: I do not know the man.
- Webster's Bible (WBS)
- And again he denied with an oath, I do not know the man.
- Young's Literal Translation (YLT)
- and again did he deny with an oath — 'I have not known the man.'
Read in context
- 70ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು.
- 71ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
- 72ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು.
- 73ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.
- 74ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
Cross references
- Zechariah 5:3–4 ಜೆಕರ್ಯ 5:3–4ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು. ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
- Acts 5:3–4 ಅಪೊಸ್ತಲರ ಕೃತ್ಯಗಳು 5:3–4ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ? ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
- Isaiah 48:1 ಯೆಶಾಯ 48:1ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
- Matthew 5:34–36 ಮತ್ತಾಯನು 5:34–36ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು. ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ. ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ.
- Zechariah 8:17 ಜೆಕರ್ಯ 8:17ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ.
- Exodus 20:7 ವಿಮೋಚನಕಾಂಡ 20:7ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Luke 22:34 ಲೂಕನು 22:34ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
- Matthew 26:74 ಮತ್ತಾಯನು 26:74ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.