Matthew · chapter 27 · verse 23
Matthew 27:23 in Kannada
ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
Aaga adhipatiyu--yaake? Aatanu kettaddenu maadi ddaane andanu. Aadare avaru--aatanannu shilubege haakisu endu hechchaagi koogikondaru.
Matthew 27:23 in English
- King James Version (KJV)
- And the governor said, Why, what evil hath he done? But they cried out the more, saying, Let him be crucified.
- World English Bible (WEB)
- But the governor said, “Why? What evil has he done?” But they cried out exceedingly, saying, “Let him be crucified!”
- American Standard Version (ASV)
- And he said, Why, what evil hath he done? But they cried out exceedingly, saying, Let him be crucified.
- Bible in Basic English (BBE)
- And he said, Why, what evil has he done? But they gave loud cries, saying, To the cross with him!
- Darby Translation (DBY)
- And the governor said, What evil then has he done? But they cried more than ever, saying, Let him be crucified.
- Webster's Bible (WBS)
- And the governor said, Why, what evil hath he done? But they cried out the more, saying, Let him be crucified.
- Young's Literal Translation (YLT)
- And the governor said, 'Why, what evil did he?' and they were crying out the more, saying, 'Let be crucified.'
Read in context
- 21ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.
- 22ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
- 23ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
- 24ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
- 25ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
Cross references
- Acts 7:57 ಅಪೊಸ್ತಲರ ಕೃತ್ಯಗಳು 7:57ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು
- Acts 23:12–15 ಅಪೊಸ್ತಲರ ಕೃತ್ಯಗಳು 23:12–15ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು. ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು. ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ. ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
- Genesis 37:18–19 ಆದಿಕಾಂಡ 37:18–19ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು. ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ;
- Acts 22:22–23 ಅಪೊಸ್ತಲರ ಕೃತ್ಯಗಳು 22:22–23ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು. ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ
- Acts 23:10 ಅಪೊಸ್ತಲರ ಕೃತ್ಯಗಳು 23:10ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
- Acts 17:5–7 ಅಪೊಸ್ತಲರ ಕೃತ್ಯಗಳು 17:5–7ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು. ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ; ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
- 1 Samuel 20:31–33 1 ಸಮುವೇಲನು 20:31–33ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು. ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು. ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
- 1 Samuel 19:3–15 1 ಸಮುವೇಲನು 19:3–15ಆಗ ನಾನು ಹೊರಟು ಬಂದು ನೀನು ಇರುವ ಹೊಲದಲ್ಲಿ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿದ್ದನ್ನು ನಿನಗೆ ತಿಳಿಸುವೆನು ಅಂದನು. ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ; ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು. ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು. ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು. ಆದರೆ ತಿರಿಗಿ ಯುದ್ಧ ಉಂಟಾ ಯಿತು; ಆಗ ದಾವೀದನು ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧ ಮಾಡಿ ಅವರನ್ನು ದೊಡ್ಡ ಸಂಹಾರ ದಿಂದ ಹೊಡೆದನು; ಅವರು ಅವನ ಎದುರಿನಿಂದ ಓಡಿಹೋದರು. ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು. ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು. ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು. ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು. ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು. ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
- Matthew 21:38–39 ಮತ್ತಾಯನು 21:38–39ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
- Acts 21:28–31 ಅಪೊಸ್ತಲರ ಕೃತ್ಯಗಳು 21:28–31ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ (ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು). ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು. ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
- 1 Samuel 22:14–19 1 ಸಮುವೇಲನು 22:14–19ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ. ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು. ಅದಕ್ಕೆ ಅರಸನುಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯವ ರೆಲ್ಲರೂ ನಿಶ್ಚಯವಾಗಿ ಸಾಯಲೇಬೇಕು ಅಂದನು. ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು. ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.