Matthew · chapter 27 · verse 3
Matthew 27:3 in Kannada
ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
Aaga aatanannu hidukotta yoodanu aatanige maranadandaneya teerpaadaddannu nodi pashchaa ttaapapattu aa moovattu belliya naanyagalanu tirigi pradhaana yaajakara mattu hiriyara balige tandu
Matthew 27:3 in English
- King James Version (KJV)
- Then Judas, which had betrayed him, when he saw that he was condemned, repented himself, and brought again the thirty pieces of silver to the chief priests and elders,
- World English Bible (WEB)
- Then Judas, who betrayed him, when he saw that Jesus was condemned, felt remorse, and brought back the thirty pieces of silver to the chief priests and elders,
- American Standard Version (ASV)
- Then Judas, who betrayed him, when he saw that he was condemned, repented himself, and brought back the thirty pieces of silver to the chief priests and elders,
- Bible in Basic English (BBE)
- Then Judas, who was false to him, seeing that he was to be put to death, in his regret took back the thirty bits of silver to the chief priests and those in authority,
- Darby Translation (DBY)
- Then Judas, who delivered him up, seeing that he had been condemned, filled with remorse, returned the thirty pieces of silver to the chief priests and the elders,
- Webster's Bible (WBS)
- Then Judas, who had betrayed him, when he saw that he was condemned, repented and brought again the thirty pieces of silver to the chief priests and elders,
- Young's Literal Translation (YLT)
- Then Judas — he who delivered him up — having seen that he was condemned, having repented, brought back the thirty silverlings to the chief priests, and to the elders, saying,
Read in context
- 1ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
- 2ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
- 3ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
- 4ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
- 5ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
Cross references
- 2 Corinthians 7:10 2 ಕೊರಿಂಥದವರಿಗೆ 7:10ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
- Job 20:15–29 ಯೋಬನು 20:15–29ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು. ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು. ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು. ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ. ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು. ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ. ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ. ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು. ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು. ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು. ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ. ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು. ಆಕಾಶಗಳು ಅವನ ಅಕ್ರಮವನ್ನು ಪ್ರಕಟಮಾಡುವವು; ಭೂಮಿಯು ಅವನಿಗೆ ವಿರೋಧವಾಗಿ ಏಳುವದು. ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ. ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
- Luke 22:47–48 ಲೂಕನು 22:47–48ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು. ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.
- Matthew 26:14–16 ಮತ್ತಾಯನು 26:14–16ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ-- ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು. ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.
- John 13:27 ಯೋಹಾನನು 13:27ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.
- Mark 14:10–11 ಮಾರ್ಕನು 14:10–11ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು. ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
- Job 20:5 ಯೋಬನು 20:5ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
- John 13:2 ಯೋಹಾನನು 13:2ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
- Luke 22:2–6 ಲೂಕನು 22:2–6ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು. ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು. ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು. ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು. ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
- Mark 14:43–46 ಮಾರ್ಕನು 14:43–46ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು. ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು. ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.
- Matthew 26:47–50 ಮತ್ತಾಯನು 26:47–50ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು. ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು. ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
- John 18:3 ಯೋಹಾನನು 18:3ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.
Original words (Greek)
- Then · G5119τότε tóte
- Judas · G2455Ἰούδας Ioúdas
- betrayed · G3860παραδίδωμι paradídōmi
- him · G846αὐτός autós
- saw · G1492εἴδω eídō
- that · G3754ὅτι hóti
- condemned · G2632κατακρίνω katakrínō
- himself · G3338μεταμέλλομαι metaméllomai
- again · G654ἀποστρέφω apostréphō
- thirty · G5144τριάκοντα triákonta
- silver · G694ἀργύριον argýrion
- priests · G749ἀρχιερεύς archiereús
- and · G2532καί kaí
- elders · G4245πρεσβύτερος presbýteros