Matthew · chapter 27 · verse 39
Matthew 27:39 in Kannada
ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--
Alli hoguttiddavaru aatanannu dooshisi tamma talegalannu allaadisuttaa--
Matthew 27:39 in English
- King James Version (KJV)
- And they that passed by reviled him, wagging their heads,
- World English Bible (WEB)
- Those who passed by blasphemed him, wagging their heads
- American Standard Version (ASV)
- And they that passed by railed on him, wagging their heads,
- Bible in Basic English (BBE)
- And those who went by said bitter words to him, shaking their heads and saying,
- Darby Translation (DBY)
- But the passers-by reviled him, shaking their heads
- Webster's Bible (WBS)
- And they that passed by, reviled him, wagging their heads,
- Young's Literal Translation (YLT)
- and those passing by were speaking evil of him, wagging their heads,
Read in context
- 37ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.
- 38ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು.
- 39ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--
- 40ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
- 41ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ--
Cross references
- Psalm 109:25 ಕೀರ್ತನೆಗಳು 109:25ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.
- Lamentations 1:12 ಪ್ರಲಾಪಗಳು 1:12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
- Mark 15:29–30 ಮಾರ್ಕನು 15:29–30ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದುಬಾ ಎಂದು ಹೇಳಿ ಆತನನು ದೂಷಿಸಿದರು.
- Psalm 69:20 ಕೀರ್ತನೆಗಳು 69:20ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
- Psalm 35:15–21 ಕೀರ್ತನೆಗಳು 35:15–21ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು. ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ. ಕರ್ತನೇ, ಎಷ್ಟರ ವರೆಗೆ ನೀನು ನೋಡುವಿ? ಅವರ ನಾಶನಗಳಿಂದಲೂ ಸಿಂಹಗಳಿಂದಲೂ ನನ್ನ ಪ್ರಿಯವಾದ ಪ್ರಾಣವನ್ನು ತಪ್ಪಿಸು. ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು. ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ. ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ. ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
- Luke 23:35–39 ಲೂಕನು 23:35–39ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು. ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು. ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್ ಲ್ಯಾಟಿನ್ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು. ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
- Job 16:4 ಯೋಬನು 16:4ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು.
- Psalm 22:17 ಕೀರ್ತನೆಗಳು 22:17ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ.
- 1 Peter 2:22–24 1 ಪೇತ್ರನು 2:22–24ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು. ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Psalm 109:2 ಕೀರ್ತನೆಗಳು 109:2ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.
- Lamentations 2:15–17 ಪ್ರಲಾಪಗಳು 2:15–17ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ? ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ. ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
- Psalm 22:6–7 ಕೀರ್ತನೆಗಳು 22:6–7ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ. ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--