Matthew · chapter 27 · verse 43
Matthew 27:43 in Kannada
ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
Ivanu devaralli vishvaasavittavanu; devarige ishtaviddare aatanu ivanannu eega bidisali; yaakandare aatanu--naanu devakumaaranu endu heliddaane andaru.
Matthew 27:43 in English
- King James Version (KJV)
- He trusted in God; let him deliver him now, if he will have him: for he said, I am the Son of God.
- World English Bible (WEB)
- He trusts in God. Let God deliver him now, if he wants him; for he said, ‘I am the Son of God.’”
- American Standard Version (ASV)
- He trusteth on God; let him deliver him now, if he desireth him: for he said, I am the Son of God.
- Bible in Basic English (BBE)
- He put his faith in God; let God be his saviour now, if he will have him; for he said, I am the Son of God.
- Darby Translation (DBY)
- He trusted upon God; let him save him now if he will [have] him. For he said, I am Son of God.
- Webster's Bible (WBS)
- He trusted in God; let him deliver him now if he will have him: for he said, I am the Son of God.
- Young's Literal Translation (YLT)
- he hath trusted on God, let Him now deliver him, if He wish him, because he said — Son of God I am;'
Read in context
- 41ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ--
- 42ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;
- 43ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
- 44ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.
- 45ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
Cross references
- Psalm 22:8 ಕೀರ್ತನೆಗಳು 22:8ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
- John 10:36 ಯೋಹಾನನು 10:36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
- Psalm 71:11 ಕೀರ್ತನೆಗಳು 71:11ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.
- Isaiah 37:10 ಯೆಶಾಯ 37:10ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
- Matthew 27:40 ಮತ್ತಾಯನು 27:40ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
- John 19:7 ಯೋಹಾನನು 19:7ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
- Psalm 14:6 ಕೀರ್ತನೆಗಳು 14:6ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
- John 5:17–25 ಯೋಹಾನನು 5:17–25ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು. ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು. ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು. ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ. ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
- Psalm 3:2 ಕೀರ್ತನೆಗಳು 3:2ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
- John 3:16–17 ಯೋಹಾನನು 3:16–17ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು. ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
- Isaiah 36:18 ಯೆಶಾಯ 36:18ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
- Psalm 42:10 ಕೀರ್ತನೆಗಳು 42:10ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.