Matthew · chapter 27 · verse 52
Matthew 27:52 in Kannada
ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು.
Idallade samaadhigalu tereyalpattavu; mattu nidrehoda aneka bhaktara dehagalu eddavu.
Matthew 27:52 in English
- King James Version (KJV)
- And the graves were opened; and many bodies of the saints which slept arose,
- World English Bible (WEB)
- The tombs were opened, and many bodies of the saints who had fallen asleep were raised;
- American Standard Version (ASV)
- and the tombs were opened; and many bodies of the saints that had fallen asleep were raised;
- Bible in Basic English (BBE)
- And the resting-places of the dead came open; and the bodies of a number of sleeping saints came to life;
- Darby Translation (DBY)
- and the tombs were opened; and many bodies of the saints fallen asleep arose,
- Webster's Bible (WBS)
- And the graves were opened, and many bodies of saints who slept, arose,
- Young's Literal Translation (YLT)
- and the tombs were opened, and many bodies of the saints who have fallen asleep, arose,
Read in context
- 50ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು.
- 51ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
- 52ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು.
- 53ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
- 54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
Cross references
- Isaiah 26:19 ಯೆಶಾಯ 26:19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
- 1 Thessalonians 4:14 1 ಥೆಸಲೊನೀಕದವರಿಗೆ 4:14ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
- 1 Corinthians 15:20 1 ಕೊರಿಂಥದವರಿಗೆ 15:20ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
- John 5:25–29 ಯೋಹಾನನು 5:25–29ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು. ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ. ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ. ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- Daniel 12:2 ದಾನಿಯೇಲನು 12:2ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
- Isaiah 25:8 ಯೆಶಾಯ 25:8ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
- 1 Thessalonians 5:10 1 ಥೆಸಲೊನೀಕದವರಿಗೆ 5:10ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
- Hosea 13:14 ಹೋಶೇಯ 13:14ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
- 1 Corinthians 15:51 1 ಕೊರಿಂಥದವರಿಗೆ 15:51ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು.
- 1 Corinthians 11:30 1 ಕೊರಿಂಥದವರಿಗೆ 11:30ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ.
- Acts 7:60 ಅಪೊಸ್ತಲರ ಕೃತ್ಯಗಳು 7:60ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.