Matthew · chapter 28 · verse 3
Matthew 28:3 in Kannada
ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
Avana mukhavu minchinanteyoo avana udupu himadanteyoo bilupaagittu.
Matthew 28:3 in English
- King James Version (KJV)
- His countenance was like lightning, and his raiment white as snow:
- World English Bible (WEB)
- His appearance was like lightning, and his clothing white as snow.
- American Standard Version (ASV)
- His appearance was as lightning, and his raiment white as snow:
- Bible in Basic English (BBE)
- His form was shining like the light, and his clothing was white as snow:
- Darby Translation (DBY)
- And his look was as lightning, and his clothing white as snow.
- Webster's Bible (WBS)
- His countenance was like lightning, and his raiment white as snow.
- Young's Literal Translation (YLT)
- and his countenance was as lightning, and his clothing white as snow,
Read in context
- 1ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
- 2ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
- 3ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
- 4ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.
- 5ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
Cross references
- Mark 9:3 ಮಾರ್ಕನು 9:3ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು.
- Acts 1:10 ಅಪೊಸ್ತಲರ ಕೃತ್ಯಗಳು 1:10ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
- Mark 16:5 ಮಾರ್ಕನು 16:5ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
- Revelation 18:1 ಪ್ರಕಟನೆ 18:1ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು.
- John 20:12 ಯೋಹಾನನು 20:12ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
- Matthew 17:2 ಮತ್ತಾಯನು 17:2ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
- Revelation 3:4–5 ಪ್ರಕಟನೆ 3:4–5ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ. ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
- Revelation 10:1 ಪ್ರಕಟನೆ 10:1ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
- Revelation 1:14–16 ಪ್ರಕಟನೆ 1:14–16ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು. ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು. ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
- Daniel 7:9 ದಾನಿಯೇಲನು 7:9ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
- Daniel 10:5–6 ದಾನಿಯೇಲನು 10:5–6ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು. ಆತನ ದೇಹವು ತಾರ್ಷೀಷ್ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.
- Ezekiel 1:4–14 ಯೆಹೆಜ್ಕೇಲನು 1:4–14ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು. ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು. ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು. ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು. ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು. ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು. ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು. ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು. ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ. ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು. ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾ ಡುತ್ತಾ ಇದ್ದವು.