Matthew · chapter 28 · verse 7
Matthew 28:7 in Kannada
ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
Begane hogi aatanu sattavarolaginda eddiddaane endu aatana shishyarige heliri; mattu igo, nimage mundaagi aatanu galilaayakke hoguttaane. Neevu aatanannu alli kaanuviri; igo, naanu nimage heliddene andanu.
Matthew 28:7 in English
- King James Version (KJV)
- And go quickly, and tell his disciples that he is risen from the dead; and, behold, he goeth before you into Galilee; there shall ye see him: lo, I have told you.
- World English Bible (WEB)
- Go quickly and tell his disciples, ‘He has risen from the dead, and behold, he goes before you into Galilee; there you will see him.’ Behold, I have told you.”
- American Standard Version (ASV)
- And go quickly, and tell his disciples, He is risen from the dead; and lo, he goeth before you into Galilee; there shall ye see him: lo, I have told you.
- Bible in Basic English (BBE)
- And go quickly and give his disciples the news that he has come back from the dead, and is going before you into Galilee; there you will see him, as I have said to you.
- Darby Translation (DBY)
- And go quickly and say to his disciples that he is risen from the dead; and behold, he goes before you into Galilee, there shall ye see him. Behold, I have told you.
- Webster's Bible (WBS)
- And go quickly, and tell his disciples, that he is risen from the dead, and behold, he goeth before you into Galilee; there shall ye see him: lo, I have told you.
- Young's Literal Translation (YLT)
- and having gone quickly, say ye to his disciples, that he rose from the dead; and lo, he doth go before you to Galilee, there ye shall see him; lo, I have told you.'
Read in context
- 5ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
- 6ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
- 7ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
- 8ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
- 9ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
Cross references
- Matthew 26:32 ಮತ್ತಾಯನು 26:32ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.
- Luke 24:22–24 ಲೂಕನು 24:22–24ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು. ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
- Matthew 28:10 ಮತ್ತಾಯನು 28:10ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
- Mark 16:7–8 ಮಾರ್ಕನು 16:7–8ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು. ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
- John 16:4 ಯೋಹಾನನು 16:4ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
- John 20:17–18 ಯೋಹಾನನು 20:17–18ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.
- Isaiah 45:21 ಯೆಶಾಯ 45:21ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
- John 21:1–14 ಯೋಹಾನನು 21:1–14ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ-- ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು. ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ. ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ. ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು. ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು. ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು). ಉಳಿದ ಶಿಷ್ಯರು ವಿಾನುಗಳಿದ್ದ ಬಲೆಯನ್ನು ಎಳೆಯುತ್ತಾ ಒಂದು ಚಿಕ್ಕ ದೋಣಿಯಲ್ಲಿ ಬಂದರು; (ಯಾಕಂದರೆ ಅವರು ದಡದಿಂದ ದೂರವಿರಲಿಲ್ಲ; ಆದರೆ ಅದು ಇನ್ನೂರು ಮೊಳ ದಷ್ಟಿತ್ತು). ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು. ಯೇಸು ಅವರಿಗೆ--ನೀವು ಈಗ ಹಿಡಿದ ವಿಾನುಗಳಲ್ಲಿ ಕೆಲ ವನ್ನು ತನ್ನಿರಿ ಅಂದನು. ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ. ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ. ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು. ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.
- 1 Corinthians 15:4 1 ಕೊರಿಂಥದವರಿಗೆ 15:4ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
- Luke 24:34 ಲೂಕನು 24:34ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು.
- Mark 16:13 ಮಾರ್ಕನು 16:13ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.
- Matthew 28:16–17 ಮತ್ತಾಯನು 28:16–17ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು. ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
Original words (Greek)
- And · G2532καί kaí
- go · G4198πορεύομαι poreúomai
- quickly · G5035ταχύ tachý
- tell · G2036ἔπω épō
- his · G846αὐτός autós
- disciples · G3101μαθητής mathētḗs
- that · G3754ὅτι hóti
- risen · G1453ἐγείρω egeírō
- from · G575ἀπό apó
- dead · G3498νεκρός nekrós
- and · G2532καί kaí
- behold · G2400ἰδού idoú
- before · G4254προάγω proágō
- you · G5209ὑμᾶς hymâs
- into · G1519εἰς eis
- Galilee · G1056Γαλιλαία Galilaía
- there · G1563ἐκεῖ ekeî
- see · G3700ὀπτάνομαι optánomai
- him · G846αὐτός autós
- lo · G2400ἰδού idoú
- told · G2036ἔπω épō
- you · G5213ὑμῖν hymîn