Matthew · chapter 3 · verse 1
Matthew 3:1 in Kannada
ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
Aa dinagalalli baaptisma maadisuva yohaananu bandu yoodaayada adaviyalli saaruttaa--
Matthew 3:1 in English
- King James Version (KJV)
- In those days came John the Baptist, preaching in the wilderness of Judaea,
- World English Bible (WEB)
- In those days, John the Baptizer came, preaching in the wilderness of Judea, saying,
- American Standard Version (ASV)
- And in those days cometh John the Baptist, preaching in the wilderness of Judæa, saying,
- Bible in Basic English (BBE)
- And in those days John the Baptist came preaching in the waste land of Judaea,
- Darby Translation (DBY)
- Now in those days comes John the baptist, preaching in the wilderness of Judaea,
- Webster's Bible (WBS)
- In those days came John the Baptist, preaching in the wilderness of Judea,
- Young's Literal Translation (YLT)
- And in those days cometh John the Baptist, proclaiming in the wilderness of Judea,
Read in context
- 1ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
- 2ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
- 3ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
Cross references
- Isaiah 40:3–6 ಯೆಶಾಯ 40:3–6ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ. ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು. ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ. ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
- John 1:6–8 ಯೋಹಾನನು 1:6–8ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು. ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು. ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು.
- Luke 1:13–17 ಲೂಕನು 1:13–17ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು. ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು. ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು. ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು. ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- Luke 1:76 ಲೂಕನು 1:76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
- Matthew 11:11 ಮತ್ತಾಯನು 11:11ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
- Luke 3:1–20 ಲೂಕನು 3:1–20ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು. ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು. ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು; ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು. ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು? ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು. ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು. ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು. ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು. ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು. ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು. ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು. ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು. ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು. ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
- Acts 19:3–4 ಅಪೊಸ್ತಲರ ಕೃತ್ಯಗಳು 19:3–4ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು. ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
- Mark 1:15 ಮಾರ್ಕನು 1:15ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
- Matthew 16:14 ಮತ್ತಾಯನು 16:14ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.
- Acts 13:24–25 ಅಪೊಸ್ತಲರ ಕೃತ್ಯಗಳು 13:24–25ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- Luke 7:24 ಲೂಕನು 7:24ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
- Acts 1:22 ಅಪೊಸ್ತಲರ ಕೃತ್ಯಗಳು 1:22ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು.