Matthew · chapter 3 · verse 15
Matthew 3:15 in Kannada
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
Adakke yesu pratyuttaravaagi avanige--sadyakke oppiko; yaakandare ellaa neetiyannu heege neraveri suvadu namage yogyavaagide endu helidanu. Aaga avanu oppikondanu.
Matthew 3:15 in English
- King James Version (KJV)
- And Jesus answering said unto him, Suffer [ it to be so] now: for thus it becometh us to fulfil all righteousness. Then he suffered him.
- World English Bible (WEB)
- But Jesus, answering, said to him, “Allow it now, for this is the fitting way for us to fulfill all righteousness.” Then he allowed him.
- American Standard Version (ASV)
- But Jesus answering said unto him, Suffer [it] now: for thus it becometh us to fulfil all righteousness. Then he suffereth him.
- Bible in Basic English (BBE)
- But Jesus made answer, saying to him, Let it be so now: because so it is right for us to make righteousness complete. Then he gave him baptism.
- Darby Translation (DBY)
- But Jesus answering said to him, Suffer [it] now; for thus it becometh us to fulfil all righteousness. Then he suffers him.
- Webster's Bible (WBS)
- And Jesus answering said to him, Suffer [it to be so] now: for thus it becometh us to fulfill all righteousness. Then he suffered him.
- Young's Literal Translation (YLT)
- But Jesus answering said to him, 'Suffer now, for thus it is becoming to us to fulfil all righteousness,' then he doth suffer him.
Read in context
- 13ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು.
- 14ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.
- 15ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
- 16ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- 17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
Cross references
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- Isaiah 42:21 ಯೆಶಾಯ 42:21ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.
- John 15:10 ಯೋಹಾನನು 15:10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- John 13:15 ಯೋಹಾನನು 13:15ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- Philippians 2:7–8 ಫಿಲಿಪ್ಪಿಯವರಿಗೆ 2:7–8ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- Psalm 40:7–8 ಕೀರ್ತನೆಗಳು 40:7–8ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ. ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- John 13:7–9 ಯೋಹಾನನು 13:7–9ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು. ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು. ಅದಕ್ಕೆ ಸೀಮೋನ ಪೇತ್ರನು ಆತ ನಿಗೆ--ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ ಅಂದನು.
- John 8:29 ಯೋಹಾನನು 8:29ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
- 1 John 2:6 1 ಯೋಹಾನನು 2:6ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
- 1 Peter 2:21–24 1 ಪೇತ್ರನು 2:21–24ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು. ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.