Matthew · chapter 3 · verse 8
Matthew 3:8 in Kannada
ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
Haagaadare maanasaantarakke takka phala galannu phalisiri;
Matthew 3:8 in English
- King James Version (KJV)
- Bring forth therefore fruits meet for repentance:
- World English Bible (WEB)
- Therefore produce fruit worthy of repentance!
- American Standard Version (ASV)
- Bring forth therefore fruit worthy of repentance:
- Bible in Basic English (BBE)
- Let your change of heart be seen in your works:
- Darby Translation (DBY)
- Produce therefore fruit worthy of repentance.
- Webster's Bible (WBS)
- Bring forth therefore fruits meet for repentance:
- Young's Literal Translation (YLT)
- bear, therefore, fruits worthy of the reformation,
Read in context
- 6ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.
- 7ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
- 8ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
- 9ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- 10ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
Cross references
- Luke 3:8 ಲೂಕನು 3:8ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- Acts 26:20 ಅಪೊಸ್ತಲರ ಕೃತ್ಯಗಳು 26:20ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
- 2 Peter 1:4–8 2 ಪೇತ್ರನು 1:4–8ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ. ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
- Galatians 5:22–23 ಗಲಾತ್ಯದವರಿಗೆ 5:22–23ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- Ephesians 5:9 ಎಫೆಸದವರಿಗೆ 5:9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
- Philippians 1:11 ಫಿಲಿಪ್ಪಿಯವರಿಗೆ 1:11ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
- Isaiah 1:16–17 ಯೆಶಾಯ 1:16–17ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
- Jeremiah 36:3 ಯೆರೆಮೀಯ 36:3ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು.
- Romans 2:4–7 ರೋಮಾಪುರದವರಿಗೆ 2:4–7ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ? ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ. ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು. ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
- Jeremiah 26:13 ಯೆರೆಮೀಯ 26:13ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.
- Matthew 21:28–30 ಮತ್ತಾಯನು 21:28–30ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು. ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
- Jeremiah 7:3–7 ಯೆರೆಮೀಯ 7:3–7ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು. ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ. ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.