Matthew · chapter 4 · verse 1
Matthew 4:1 in Kannada
ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.
Aaga yesu saitaananinda shodhisalpadu vadakkaagi aatmaninda adavige nadisalpattanu.
Matthew 4:1 in English
- King James Version (KJV)
- Then was Jesus led up of the Spirit into the wilderness to be tempted of the devil.
- World English Bible (WEB)
- Then Jesus was led up by the Spirit into the wilderness to be tempted by the devil.
- American Standard Version (ASV)
- Then was Jesus led up of the Spirit into the wilderness to be tempted of the devil.
- Bible in Basic English (BBE)
- Then Jesus was sent by the Spirit into the waste land to be tested by the Evil One.
- Darby Translation (DBY)
- Then Jesus was carried up into the wilderness by the Spirit to be tempted of the devil:
- Webster's Bible (WBS)
- Then was Jesus led by the Spirit into the wilderness, to be tempted by the devil.
- Young's Literal Translation (YLT)
- Then Jesus was led up to the wilderness by the Spirit, to be tempted by the Devil,
Read in context
- 1ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.
- 2ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
- 3ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
Cross references
- Hebrews 2:18 ಇಬ್ರಿಯರಿಗೆ 2:18ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Luke 4:1–13 ಲೂಕನು 4:1–13ಯೇಸು ಪರಿಶುದ್ಧಾತ್ಮನಿಂದ ತುಂಬಿದವನಾಗಿ ಯೊರ್ದನಿನಿಂದ ಹಿಂತಿರುಗಿ ಬಂದು ಆತ್ಮ ನಿಂದ ಅಡವಿಯೊಳಕ್ಕೆ ನಡಿಸಲ್ಪಟ್ಟು ನಾಲ್ವತ್ತು ದಿನಗಳು ಸೈತಾನನಿಂದ ಶೋಧಿಸಲ್ಪಡುತ್ತಿದ್ದನು. ಆ ದಿನಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಮುಗಿದ ಮೇಲೆ ಆತನು ಹಸಿದನು. ಆಗ ಸೈತಾನನು ಆತ ನಿಗೆ--ನೀನು ದೇವಕುಮಾರನಾಗಿದ್ದರೆ ಈ ಕಲ್ಲು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಮನುಷ್ಯನು ರೊಟ್ಟಿಯಿಂದ ಮಾತ್ರವೇ ಅಲ್ಲ, ಆದರೆ ದೇವರ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು. ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು. ಸೈತಾನನು ಆತನಿಗೆ--ಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡುವೆನು; ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು. ಆದದರಿಂದ ನೀನು ನನ್ನನ್ನು ಆರಾಧಿಸಿದರೆ ಎಲ್ಲವುಗಳು ನಿನ್ನದಾಗುವವು ಎಂದು ಹೇಳಿದನು. ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು. ಇದಲ್ಲದೆ ಅವನು ಆತನನ್ನು ಯೆರೂಸಲೇಮಿಗೆ ಕರತಂದು ದೇವಾಲಯ ಗೋಪುರದ ಮೇಲೆ ನಿಲ್ಲಿಸಿ ಆತನಿಗೆ--ನೀನು ದೇವಕುಮಾರನಾಗಿದ್ದರೆ ಇಲ್ಲಿಂದ ಕೆಳಗೆ ದುಮುಕು; ಆತನು ನಿನ್ನನ್ನು ಕಾಯುವದಕ್ಕೆ ತನ್ನ ದೂತರಿಗೆ ಅಪ್ಪಣೆ ಕೊಡುವನು; ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸ ದಂತೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದನು. ಅದಕ್ಕೆ ಯೇಸು ಪ್ರತ್ಯು ತ್ತರವಾಗಿ ಅವನಿಗೆ--ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಹೇಳಲ್ಪಟ್ಟಿದೆ ಅಂದನು. ಸೈತಾನನು ಎಲ್ಲಾ ಶೋಧನೆಯನ್ನು ಮುಗಿಸಿದ ಮೇಲೆ ಸ್ವಲ್ಪ ಕಾಲ ಆತನ ಬಳಿಯಿಂದ ಹೊರಟು ಹೋದನು.
- Mark 1:12–15 ಮಾರ್ಕನು 1:12–15ತಕ್ಷಣವೇ ಆತ್ಮನು ಆತನನ್ನು ಅಡವಿಯೊಳಕ್ಕೆ ನಡಿಸಿದನು. ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು. ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ-- ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
- Hebrews 4:15–16 ಇಬ್ರಿಯರಿಗೆ 4:15–16ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ. ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Romans 8:14 ರೋಮಾಪುರದವರಿಗೆ 8:14ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
- Ezekiel 43:5 ಯೆಹೆಜ್ಕೇಲನು 43:5ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು.
- John 14:30 ಯೋಹಾನನು 14:30ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
- Ezekiel 3:14 ಯೆಹೆಜ್ಕೇಲನು 3:14ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
- Ezekiel 3:12 ಯೆಹೆಜ್ಕೇಲನು 3:12ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
- Acts 8:39 ಅಪೊಸ್ತಲರ ಕೃತ್ಯಗಳು 8:39ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
- 1 Kings 18:12 1 ಅರಸುಗಳು 18:12ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.
- Ezekiel 40:2 ಯೆಹೆಜ್ಕೇಲನು 40:2ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.