Matthew · chapter 4 · verse 9
Matthew 4:9 in Kannada
ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
Neenu addabiddu nannannu aaraadhisidare ivugalannellaa naanu ninage koduvenu andanu.
Matthew 4:9 in English
- King James Version (KJV)
- And saith unto him, All these things will I give thee, if thou wilt fall down and worship me.
- World English Bible (WEB)
- He said to him, “I will give you all of these things, if you will fall down and worship me.”
- American Standard Version (ASV)
- and he said unto him, All these things will I give thee, if thou wilt fall down and worship me.
- Bible in Basic English (BBE)
- And he said to him, All these things will I give you, if you will go down on your face and give me worship.
- Darby Translation (DBY)
- and says to him, All these things will I give thee if, falling down, thou wilt do me homage.
- Webster's Bible (WBS)
- And saith to him, All these things will I give thee, if thou wilt fall down and worship me.
- Young's Literal Translation (YLT)
- and saith to him, 'All these to thee I will give, if falling down thou mayest bow to me.'
Read in context
- 7ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
- 8ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
- 9ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
- 10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- 11ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
Cross references
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- John 16:11 ಯೋಹಾನನು 16:11ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
- Daniel 5:18–19 ದಾನಿಯೇಲನು 5:18–19ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು. ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
- Revelation 19:10 ಪ್ರಕಟನೆ 19:10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
- Revelation 22:8–9 ಪ್ರಕಟನೆ 22:8–9ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು. ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.
- 1 Corinthians 10:20–21 1 ಕೊರಿಂಥದವರಿಗೆ 10:20–21ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ. ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
- Psalm 72:11 ಕೀರ್ತನೆಗಳು 72:11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Proverbs 8:15 ಜ್ಞಾನೋಕ್ತಿಗಳು 8:15ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು.
- Daniel 5:26–28 ದಾನಿಯೇಲನು 5:26–28ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ; ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ. ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
- Psalm 113:7–8 ಕೀರ್ತನೆಗಳು 113:7–8ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ, ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- 1 Samuel 2:7–8 1 ಸಮುವೇಲನು 2:7–8ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Matthew 26:15 ಮತ್ತಾಯನು 26:15ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.