Matthew · chapter 5 · verse 25
Matthew 5:25 in Kannada
ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
Ninna virodhiya sangada neenu daariya lliruvaagale tvareyaagi avana kooda ondaagu; illavaadare yaava samayadalliyaadaroo aa virodhiyu ninnannu nyaayaadhipatige oppisaanu mattu nyaayaadhipatiyu ninnannu adhikaarige oppisaanu; aaga neenu sereyalli haakalpaduvi.
Matthew 5:25 in English
- King James Version (KJV)
- Agree with thine adversary quickly, whiles thou art in the way with him; lest at any time the adversary deliver thee to the judge, and the judge deliver thee to the officer, and thou be cast into prison.
- World English Bible (WEB)
- Agree with your adversary quickly while you are with him on the way; lest perhaps the prosecutor deliver you to the judge, and the judge deliver you to the officer, and you be cast into prison.
- American Standard Version (ASV)
- Agree with thine adversary quickly, while thou art with him in the way; lest haply the adversary deliver thee to the judge, and the judge deliver thee to the officer, and thou be cast into prison.
- Bible in Basic English (BBE)
- Come to an agreement quickly with him who has a cause against you at law, while you are with him on the way, for fear that he may give you up to the judge and the judge may give you to the police and you may be put into prison.
- Darby Translation (DBY)
- Make friends with thine adverse party quickly, whilst thou art in the way with him; lest some time the adverse party deliver thee to the judge, and the judge deliver thee to the officer, and thou be cast into prison.
- Webster's Bible (WBS)
- Agree with thy adversary quickly, while thou art in the way with him; lest at any time the adversary deliver thee to the judge, and the judge deliver thee to the officer, and thou be cast into prison.
- Young's Literal Translation (YLT)
- 'Be agreeing with thy opponent quickly, while thou art in the way with him, that the opponent may not deliver thee to the judge, and the judge may deliver thee to the officer, and to prison thou mayest be cast,
Read in context
- 23ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ
- 24ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
- 25ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
- 26ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.
- 27ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ;
Cross references
- Luke 12:58–59 ಲೂಕನು 12:58–59ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು. ನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
- Proverbs 25:8 ಜ್ಞಾನೋಕ್ತಿಗಳು 25:8ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
- Hebrews 3:13 ಇಬ್ರಿಯರಿಗೆ 3:13ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
- Luke 14:31–32 ಲೂಕನು 14:31–32ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ? ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Hebrews 3:7 ಇಬ್ರಿಯರಿಗೆ 3:7ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
- Luke 13:24–25 ಲೂಕನು 13:24–25ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ. ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
- Job 22:21 ಯೋಬನು 22:21ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.
- Hebrews 12:17 ಇಬ್ರಿಯರಿಗೆ 12:17ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
- Proverbs 6:1–5 ಜ್ಞಾನೋಕ್ತಿಗಳು 6:1–5ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ ನಿನ್ನ ಬಾಯಿ ಮಾತುಗಳಿಂದ ನೀನು ಸಿಕ್ಕಿಕೊಂಡಿದ್ದೀ. ನಿನ್ನ ಬಾಯಿ ಮಾತುಗಳಿಂದಲೇ ನೀನು ಹಿಡಿಯಲ್ಪಟ್ಟಿದ್ದೀ. ನನ್ನ ಮಗನೇ, ನಿನ್ನ ಸ್ನೇಹಿತನ ಕೈಗೆ ಸಿಕ್ಕಿದಾಗ ತಪ್ಪಿಸಿಕೊಳ್ಳಲು ಇದನ್ನು ಮಾಡು. ಹೋಗಿ ನಿನ್ನನ್ನು ನೀನು ತಗ್ಗಿಸಿಕೊಂಡು ನಿನ್ನ ಸ್ನೇಹಿತನಿಗೆ ಹೊಣೆಯಾಗು. ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ. ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
- 1 Kings 22:26–27 1 ಅರಸುಗಳು 22:26–27ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
- Genesis 33:3–11 ಆದಿಕಾಂಡ 33:3–11ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವ ವರೆಗೆ ಏಳು ಸಾರಿ ನೆಲದ ವರೆಗೆ ಬೊಗ್ಗಿದನು. ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು. ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು. ಆಗ ದಾಸಿಯರೂ ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು. ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು. ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು. ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು. ಆಗ ಯಾಕೋಬನು--ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತಕ್ಕೊಳ್ಳಬೇಕು. ಯಾಕಂದರೆ ನಾನು ದೇವರ ಮುಖವನ್ನು ಕಂಡ ಹಾಗೆ ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.