Matthew · chapter 5 · verse 29
Matthew 5:29 in Kannada
ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
Aadadarinda ninna balagannu ninage abhyantaravaagiddare adannu kittu ninninda bisaadibidu; yaakandare ninna idee shareeravu narakadalli haakalpaduvadakkinta ninna angagalalli ondu naashavaaguvadu ninage laabhakaravaagide.
Matthew 5:29 in English
- King James Version (KJV)
- And if thy right eye offend thee, pluck it out, and cast [it] from thee: for it is profitable for thee that one of thy members should perish, and not [that] thy whole body should be cast into hell.
- World English Bible (WEB)
- If your right eye causes you to stumble, pluck it out and throw it away from you. For it is more profitable for you that one of your members should perish than for your whole body to be cast into Gehenna.
- American Standard Version (ASV)
- And if thy right eye causeth thee to stumble, pluck it out, and cast it from thee: for it is profitable for thee that one of thy members should perish, and not thy whole body be cast into hell.
- Bible in Basic English (BBE)
- And if your right eye is a cause of trouble to you, take it out and put it away from you; because it is better to undergo the loss of one part, than for all your body to go into hell.
- Darby Translation (DBY)
- But if thy right eye be a snare to thee, pluck it out and cast it from thee: for it is profitable for thee that one of thy members perish, and not thy whole body be cast into hell.
- Webster's Bible (WBS)
- And if thy right eye shall cause thee to sin, pluck it out, and cast [it] from thee: for [it] is profitable for thee that one of thy members should perish, and not [that] thy whole body should be cast into hell.
- Young's Literal Translation (YLT)
- 'But, if thy right eye doth cause thee to stumble, pluck it out and cast from thee, for it is good to thee that one of thy members may perish, and not thy whole body be cast to gehenna.
Read in context
- 27ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ;
- 28ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
- 29ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
- 30ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
- 31ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;
Cross references
- Romans 8:13 ರೋಮಾಪುರದವರಿಗೆ 8:13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- Mark 9:43–48 ಮಾರ್ಕನು 9:43–48ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು; ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು. ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು. ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
- Colossians 3:5 ಕೊಲೊಸ್ಸೆಯವರಿಗೆ 3:5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
- Romans 6:6 ರೋಮಾಪುರದವರಿಗೆ 6:6ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
- 1 Peter 4:1–3 1 ಪೇತ್ರನು 4:1–3ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ. ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- 1 Corinthians 9:27 1 ಕೊರಿಂಥದವರಿಗೆ 9:27ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
- Galatians 5:24 ಗಲಾತ್ಯದವರಿಗೆ 5:24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
- Matthew 18:8–9 ಮತ್ತಾಯನು 18:8–9ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು. ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
- Luke 9:24–25 ಲೂಕನು 9:24–25ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು. ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
- Mark 8:36 ಮಾರ್ಕನು 8:36ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
- Matthew 23:15 ಮತ್ತಾಯನು 23:15ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
- Matthew 10:28 ಮತ್ತಾಯನು 10:28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.